ಅನಂತಾಡಿ – ನೆಟ್ಲ ಮುಡ್ನೂರು ಸಂಪರ್ಕ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ

ಅನಂತಾಡಿ ಮತ್ತು ನೆಟ್ಲ ಮುಡ್ನೂರು ಎರಡೂ ಗ್ರಾಮವನ್ನು ಸಂಪರ್ಕಗೊಳಿಸುವ ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿಸುವ ಅಭಿವೃದ್ಧಿ ಕಾರ್ಯಕ್ಕೆ ಶಾಸಕರ ವಿಶೇಷ ಅನುಧಾನ ರೂ. 40 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೂಮಿ ಪೂಜೆ ನೆರವೇರಿಸಿದರು.

VNR GOLD
ಬಳಿಕ ಮಾತನಾಡಿದ ಅವರು ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅತ್ಯಂತ ಪುರಾತನ ಮತ್ತು ಬಹಳ ಪ್ರಸಿದ್ಧಿಯಾಗಿದೆ. ಇಲ್ಲಿಗೆ ಬರುವ ಭಕ್ತಾದಿಗಳಿಗೆ ಅನುಕೂಲವಾಗಲೆಂದು ಮತ್ತು ಎರಡು ಗ್ರಾಮದ ಜನರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಒಟ್ಟು 40 ಲಕ್ಷ ವೆಚ್ಚದಲ್ಲಿ ಈ ರಸ್ತೆಗೆ ಕಾಂಕ್ರೀಟಿಕರಣ ಮಾಡಲಾಗುತ್ತದೆ ಎಂದರು.

ಗುತ್ತಿಗೆದಾರರು ಉತ್ತಮವಾಗಿ ಕೆಲಸ ನಿರ್ವಹಿಸಿ, ಗುಣಮಟ್ಟದ ರಸ್ತೆಯನ್ನು ಜನರಿಗೆ ನೀಡುತ್ತಾರೆ ಎಂಬ ಭರವಸೆ ಇದೆ.ಕಾಮಗಾರಿ ವೇಳೆ ಗ್ರಾಮದ ಜನರ ಸಹಕಾರ ಕೂಡ ಅತ್ಯಗತ್ಯವಾಗಿದ್ದು, ಜನರಿಗೂ ತೊಂದರೆಯಾಗದಂತೆ ಹೊಂದಾಣಿಕೆಯಿಂದ ಕಾಮಗಾರಿಯನ್ನು ನಡೆಸುವಂತೆ ಮಾನ್ಯ ಶಾಸಕರು ತಿಳಿಸಿದರು.

ಜನರ ಬೇಡಿಕೆಗಳು ಇನ್ನೂ ಅನೇಕ ಇವೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಬರುವ ಎಲ್ಲಾ ಅನುದಾನವನ್ನು ಬಳಸಿಕೊಂಡು ಆದ್ಯತೆಯ ನೆಲೆಯಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಂಡಲದ ಕೇತ್ರ ಕಾರ್ಯದರ್ಶಿ ಸನತ್ ಕುಮಾರ್ ರೈ, ಬಿಜೆಪಿ ಮಾಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅರವಿಂದ ರೈ, ಕಾರ್ಯದರ್ಶಿ ನಾಗೇಶ್ ಭಂಡಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಸುರೇಶ್ ,ಉಪಾಧ್ಯಕ್ಷೆ ಸಂಧ್ಯಾವಿಶ್ವನಾಥ, ಕರಿಂಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನರೇಂದ್ರ ರೈ ನೆಲ್ತೊಟ್ಟು, ಬಿಜೆಪಿ
ಗ್ರಾಮ ಪ್ರಮುಖ್ ರಾದ ಮಹಾಬಲ ಪೂಜಾರಿ ಬಾಕಿಲ, ನವೀನ ಆಚಾರ್ಯ, ಶಿವರಾಮ್ ಶೆಟ್ಟಿ ಕರಿಂಕ, ಧನಂಜಯ ಗೌಡ ಮೀನಾವು ಮಹಿಳಾ ಮೋರ್ಚಾ ,ಉಪಾಧ್ಯಕ್ಷೆ ಗೀತಾಚಂದ್ರಶೇಖರ್ ಗೋಳಿಕಟ್ಟೆ, ಬಿಜೆಪಿ ಪ್ರಮಖರಾದ ಜ್ಯೋತಿ ಹೆಗ್ಡೆ, ನವೀನ್ ಶೆಟ್ಟಿ, ಶಕೀಲ ಕೃಷ್ಣಪ್ಪ ಪೂಜಾರಿ, ಅಶೋಕ್ ರೈ ಎಲ್ಕಾಜೆ, ಬಾಲಕೃಷ್ಣ ನಾಯ್ಕ್, ಬಾಲಕೃಷ್ಣ ಪೂಜಾರಿ ಸಾಯಿ , ದಯಾನಂದ ಗೌಡ,ರಾಮಪ್ಪ ಗೌಡ,ಜಯರಾಮ್ ಆಚಾರಿ , ರಮೇಶ್ ಗೌಡ,ಕೃಷ್ಣಪ್ಪ ಗೌಡ, ಶಿವಾನಂದ ಶೆಟ್ಟಿ, ಕುಸುಮಧರ, ಧರ್ನಪ್ಪ ಗೌಡ,ಗಣೇಶಾನಂದ ಶೆಟ್ಟಿ, ಉದಯ ಗೌಡ ಕೊಂಕನೋಡಿ, ವಸಂತ್ ರಾಜ್ ಭಟ್,ಚೇತನ್ ರೈ,ಸ್ಥಳದಾನಿಗಳಾದ ರಾಧಾ ಕೃಷ್ಣ ಭಾಗವತ್, ಕೆ.ಟಿ.ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅನಂತಾಡಿ – ನೆಟ್ಲ ಮುಡ್ನೂರು ಸಂಪರ್ಕ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*