ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಯುವವಾಹಿನಿಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ.

ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು.2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್, ಜತೆ ಕಾರ್ಯದರ್ಶಿಯಾಗಿ ಧನುಷ್ ಮಧ್ವ ಹಾಗೂ ಕೋಶಾಧಿಕಾರಿಯಾಗಿ ಪ್ರಜಿತ್ ಅಮೀನ್ ಏರಮಲೆ ಪದಾಧಿಕಾರಿಗಳಾಗಿ ಆಯ್ಕೆಯಾದರು. ಆಂತರಿಕ ಲೆಕ್ಕ ಪರಿಶೋಧಕರಾಗಿ ನವೀನ್ ಪೂಜಾರಿ ಲೊರೆಟ್ಟೊ, ವಿದ್ಯಾನಿಧಿ ನಿರ್ದೇಶಕರಾಗಿ ಯೋಗೀಶ್ ಪೂಜಾರಿ ಕಲ್ಲಡ್ಕ, ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾಗಿ ಮಹೇಶ್ ಪೂಜಾರಿ ಬೊಳ್ಳಾಯಿ, ಕ್ರೀಡಾ ನಿರ್ದೇಶಕರಾಗಿ ವಿಕ್ರಮ್ ಶಾಂತಿ ಕೆರೆಕೋಡಿಗುತ್ತು, ಸಾಂಸ್ಕೃತಿಕ ನಿರ್ದೇಶಕರಾಗಿ ನವೀನ್ ಕುಡ್ಮೇರ್, ಪ್ರಚಾರ ನಿರ್ದೇಶಕರಾಗಿ ಬ್ರಿಜೇಶ್ ಕಂಜತ್ತೂರು, ಆರೋಗ್ಯ ನಿರ್ದೇಶಕರಾಗಿ ಶೇಖರ ಪೂಜಾರಿ ಅಗಲ್ದೋಡಿ, ಸಮಾಜ ಸೇವಾ ನಿರ್ದೇಶಕರಾಗಿ ಚಿನ್ನಾ ಕಲ್ಲಡ್ಕ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ಅಶ್ವಿನ್ ಅಮೀನ್, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ನವೀನ್ ಪೂಜಾರಿ ಕಾರಾಜೆ, ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾಗಿ ಕಾವ್ಯಾ ಸೋರ್ನಾಡು ಹಾಗೂ ಮಹಿಳಾ ಸಂಘಟನೆ ನಿರ್ದೇಶಕರಾಗಿ ಸ್ನೇಹಾ ಸುರೇಶ್ ಆಯ್ಕೆಯಾದರು. ಸಂಘಟನಾ ಕಾರ್ಯದರ್ಶಿಗಳಾಗಿ ಸರಿತಾ, ಜಗನ್ನಾಥ್ ಕಲ್ಲಡ್ಕ, ಚಿಂತನ್ ರಾಜ್, ಸುನೀತಾ ಮಾರ್ನಬೈಲು, ದೀರಜ್ ಕೋಟ್ಯಾನ್ ಜಕ್ರಿಬೆಟ್ಟು, ಮಲ್ಲಿಕಾ ಜ್ಯೋತಿಗುಡ್ಡೆ, ಮನ್ವಿತ್ ಕಾಂಜಿರಕೋಡಿ ಹಾಗೂ ನಿತಿನ್ ಕೆಮ್ಮಟೆಗುಡ್ಡೆ ಆಯ್ಕೆಯಾದರು. ಆಯ್ಕೆ ಸಮಿತಿಯ ಸದಸ್ಯರಾದ ರಾಮಚಂದ್ರ ಸುವರ್ಣ, ಪ್ರೇಮನಾಥ್ ಕೆ, ನಾಗೇಶ್ ಪೊನ್ನೋಡಿ, ರಾಜೇಶ್ ಸುವರ್ಣ ಹಾಗೂ ನಾಗೇಶ್ ಪೂಜಾರಿ ನೈಬೇಲು ಅವರು ಆಯ್ಕೆ ಪ್ರಕ್ರಿಯೆಗೆ ಸಹಕಾರ ನೀಡಿದರು.

VNR GOLD

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*