ಬಂಟ್ವಾಳ

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬ

ಮಕ್ಕಳು  ಸಂತಸದ ಕಲಿಕೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಮತ್ತು ಇಷ್ಟಪಟ್ಟು ಓದಿಕೊಳ್ಳುವಂತಾಗಬೇಕೆನ್ನುವ ಉದ್ದೇಶದಿಂದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜಿಸಲಾಯಿತು.

VNR GOLD

ವಿಶೇಷ ಅತಿಥಿಯಾಗಿ ಶಾಲಾ ಹಿರಿಯ ವಿದ್ಯಾರ್ಥಿ ವೀಣಾ ಸರಸ್ವತಿ ಮಾತನಾಡಿ ಮಳೆ ಹಬ್ಬದಂತಹ ಪಠ್ಯಪೂರಕ ಶಿಬಿರಗಳು ವಿದ್ಯಾರ್ಥಿಗಳ ಕಲಿಕಾ ಚೈತನ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಸಂಶಯವಿಲ್ಲ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ ರಾವ್ ಅಧ್ಯಕ್ಷತೆ ವಹಿಸಿದ್ದರು.

ಮೂರು ದಿನಗಳ ಕಾಲ ನಡೆದ ಮಳೆಹಬ್ಬದಲ್ಲಿ  ಅಂದಾಜು 300 ವಿದ್ಯಾರ್ಥಿಗಳು ಭಾಗವಹಿಸಿದರು. ವಿವಿಧ ರೀತಿಯ ಜಾಗೃತಿ ಹಾಡುಗಳು, ಚಪ್ಪಾಳೆಗಳ ವೈವಿಧ್ಯತೆಗಳೊಂದಿಗೆ ಸಂಪನ್ಮೂಲ ವ್ಯಕ್ತಿಯಾದ ಮಕ್ಕಳ ರಂಗಭೂಮಿ ಕಲಾವಿದ ಕೃಷ್ಣಪ್ಪ ಬಂಬಿಲ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತರು.  ಕತ್ತಲೆ ಹಾಡು ಖ್ಯಾತಿಯ ನಾದ ಮಣಿನಾಲ್ಕೂರು ವಿದ್ಯಾರ್ಥಿಗಳಲ್ಲಿ ಸಾಧನೆ ಮತ್ತು ಸಾಧ್ಯತೆಗಳ ಕುರಿತಾಗಿ ಅರಿವಿನ ಪಯಣದ ಬುತ್ತಿಯನ್ನು ಹಂಚಿದರು. ವಿವಿಧ ರೀತಿಯ ಹಾಡುಗಳು ಹಾಗೂ ಪ್ರಸಕ್ತ ಬದುಕಿನ ಸುಂದರ ಘಟನೆಗಳನ್ನು ಹೆಣೆಯುತ್ತಾ ವಿದ್ಯಾರ್ಥಿಗಳಿಗೆ ಅರಿವಿನ ಬೆಳಕನ್ನು ಚೆಲ್ಲಿದರು.

ಜಾಹೀರಾತು

ಪರಿಸರ ತ್ಯಾಜ್ಯ ಮತ್ತು ಅದರ ನಿರ್ವಹಣೆ ಕುರಿತಾಗಿ ಹಸಿರು ದಳದ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಬಜಾಲ್  ಮಾಹಿತಿ ಒದಗಿಸಿದರು. ಮನೆಯೊಳಗಿನ ಕಸವನ್ನು ವಿಲೇವಾರಿ ಮಾಡುವ ಬಗೆ ಮತ್ತು ಪರಿಸರದ ಜೊತೆಗಿನ ನಮ್ಮ ನಿಲುವನ್ನು ಬಲಪಡಿಸಬೇಕೆನ್ನುವ ಮಾತುಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು. ಪ್ರಕೃತಿಯ ಉಳಿವಿನಲ್ಲಿ ನಮ್ಮ ಪಾತ್ರದ ಅಗತ್ಯತೆಯನ್ನು ಪ್ರತಿಬಿಂಬಿಸುವ ನೀರು – ಬೇರು ವಿಷಯದ ಕುರಿತಂತೆ ರಾಜ್ಯಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ರಮೇಶ್ ಬಾಯಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ತುಂಬಿದ ಮಾತುಗಳನ್ನಾಡಿದರು. ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಮಾಜಿ ಸೈನಿಕರಾದ ರಮೇಶ್ ರಾವ್ ನೂಜಿಪ್ಪಾಡಿ, ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಶಿಕ್ಷಕರಾದ  ದೇವಕಿ ಎಚ್, ನಿವೃತ್ತ ಶಿಕ್ಷಕಿಯಾದ ಅನುಸೂಯ ರಾವ್, ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಸುಶೀಲ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಹಿಂದಿ ಭಾಷಾ ಶಿಕ್ಷಕಿ ಶಾಂತ ಎಸ್ ಸ್ವಾಗತಿಸಿದರು. ಕಲಾ ಶಿಕ್ಷಕ ಜಗನ್ನಾಥ್ ವಂದಿಸಿದರು  ಚಿತ್ರಕಲಾವಿದ ತಾರಾನಾಥ ಕೈರಂಗಳ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.