ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಬಿಸಿ ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿಯಲ್ಲಿ ಅಸೆಂಬ್ಲಿ ಪ್ರತಿನಿಧಿ ಸಭೆಯು ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್, “ನಿಜವಾದ ನಾಯಕತ್ವವು ಅಧಿಕಾರ ಮತ್ತು ಹುದ್ದೆಗಳಿಗಾಗಿ ಅಲ್ಲ; ಜನರ ಹಕ್ಕುಗಳು, ನ್ಯಾಯ ಹಾಗೂ ಸಮಾನತೆಯ ಪರವಾಗಿ ನಿರಂತರವಾಗಿ ಹೋರಾಡುವ ಮೂಲಕ ರೂಪುಗೊಳ್ಳುತ್ತದೆ. ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ಅಕ್ರಮ, ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯ ವಿರುದ್ಧ ಕಾರ್ಯಕರ್ತರು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.
ಸಮಾರೋಪ ಭಾಷಣವನ್ನು ಜಿಲ್ಲಾ ಕಾರ್ಯದರ್ಶಿ ನವಾಜ್ ಕಟ್ಟೆ ಮಾಡಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವುದು, ಜನಪರ ಹೋರಾಟಗಳನ್ನು ತೀವ್ರಗೊಳಿಸುವುದು ಹಾಗೂ ಜನರ ವಿಶ್ವಾಸ ಮತ್ತು ಬೆಂಬಲವನ್ನು ಗಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸೇವಾ ಮನೋಭಾವದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.ಅತಿಥಿಗಳಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮೂನಿಷ್ ಅಲಿ ಹಾಗೂ ಕಾರ್ಯದರ್ಶಿ ಅಶ್ರಫ್ ತಲಪಾಡಿ ಆಗಮಿಸಿದ್ದರು.

ಸಭೆಯಲ್ಲಿ ಅಸೆಂಬ್ಲಿ ವ್ಯಾಪ್ತಿಯ ವಿವಿಧ ಬ್ಲಾಕ್, ವಾರ್ಡ್ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿ ಸಂಘಟನಾ ಬಲವರ್ಧನೆ, ಸದಸ್ಯತ್ವ ಅಭಿಯಾನ, ಜನಸಂಪರ್ಕ ಕಾರ್ಯಕ್ರಮಗಳು ಹಾಗೂ ಮುಂಬರುವ ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಿದರು.
ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಮಧ್ಯಂತರ ವರದಿಯನ್ನು ವಾಚಿಸಿದರು.ಪ್ರತಿನಿಧಿ ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಸಮಿತಿ ಸದಸ್ಯರಾಗಿ ಶರೀಫ್ ವಳವೂರು, ಹೈದರ್ ಕಾವಳಕಟ್ಟೆ, ಹಂಝ ನಂದಾವರ ಹಾಗೂ ಇಸ್ಮಾಯಿಲ್ ಬಾವ ಆಲಡ್ಕ ಅವರನ್ನು ಆಯ್ಕೆ ಮಾಡಲಾಯಿತು.ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಬೊಳ್ಳಾಯಿ ಸ್ವಾಗತಿಸಿ, ಕ್ಷೇತ್ರ ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ ಧನ್ಯವಾದಗೈದರು


Be the first to comment on "ಜನಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿಯಾಗಬೇಕು : ಶಾಕಿರ್ ಅಳಕೆಮಜಲ್"