ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಬಾಲಕೃಷ್ಣ ಗಟ್ಟಿ ನಿಧನ

ಮಂಗಳೂರು: ಕರ್ನಾಟಕ ಕರಾವಳಿಯಲ್ಲಿನ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ| ಕೆ.ಬಾಲಕೃಷ್ಣ ಗಟ್ಟಿ (83) ಅವರು ಇಂದಿಲ್ಲಿ ನಿಧನರಾದರು.  ಬಂಟ್ವಾಳ ಎಸ್‌.ವಿ.ಎಸ್ ಕಾಲೇಜ್‌ನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ ಅವರು 1998-2003ರ ಅವಧಿಯಲ್ಲಿ ‘ಜನವಾಹಿನಿ’ ದೈನಿಕ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.ವೃತ್ತಿಯಿಂದ ನಿವೃತ್ತರಾದ ಬಳಿಕ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಒಬ್ಬಳು ಪುತ್ರಿ ಮತ್ತು ಬಂಧು ಬಳಗವನ್ನು ಆಗಲಿದ್ದಾರೆ. ಮೂಲತಃ ಕುಂಬಳೆಯವರಾದ ಬಾಲಕೃಷ್ಣ ಗಟ್ಟಿ ಅವರು ಕುಂಬಳೆಯ ಹಿರಿಯ ಸಾಮಾಜಿಕ ಧುರೀಣ ದಿವಂಗತ ಮಹಾಲಿಂಗ ಗಟ್ಟಿ ಅವರು ಪುತ್ರ .

ಕೇರಳದ ಕಣ್ಣೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಅವರು ಬಂಟ್ವಾಳ ಎಸ್ .ವಿ. ಎಸ್ .ಕಾಲೇಜಿನಲ್ಲಿ ಸುದೀರ್ಘ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಉಪನ್ಯಾಸಕ ವೃತ್ತಿಯ ನಿವೃತ್ತಿ ಬಳಿಕ ಕೆಲವೊಂದು ಕಾಲೇಜುಗಳಲ್ಲಿ ಆಡಳಿತಾಧಿಕಾರಿಯಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

VNR GOLD

ಬಂಟ್ವಾಳ ತಾಲೂಕಿನಿಂದ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ವರದಿಗಾರರಾಗಿ ಅವರು ದೀರ್ಘಕಾಲ ಕಾರ್ಯನಿರ್ವಹಿಸಿದ್ದರು. ನೇತ್ರಾವತಿ ವಾರ್ತೆ ದೈನಿಕವನ್ನು ಪ್ರಾರಂಭಿಸಿ ಅನೇಕ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶಕರಾಗಿದ್ದರು. ಜನವಾಹಿನಿ ದೈನಿಕದ ಕಾರ್ಯನಿರ್ವಾಹಕ ಸಂಪಾದಕರಾಗಿ ಪತ್ರಿಕೆಯನ್ನು ಮುನ್ನಡೆಸಿದ್ದ ಬಾಲಕೃಷ್ಣ ಗಟ್ಟಿ ಸರಳ ನಿಷ್ಠುರ ಬರೆವಣಿಗೆ ಮೂಲಕ ಪತ್ರಿಕಾರಂಗದಲ್ಲಿ ಗುರುತಿಸಲ್ಪಟ್ಟಿದ್ದರು. ಬಂಟ್ವಾಳ ತಾಲೂಕು ಪತ್ರಕರ್ತರ ಸಂಘ ಸ್ಥಾಪನೆ ಮಾಡಿ ಸ್ಥಾಪಕಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2024 ನವಂಬರ 12ರಂದು ನಡೆದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಬಾಲಕೃಷ್ಣ ಗಟ್ಟಿ ನಿಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*