ಬಾಲಕಾರ್ಮಿಕ ಪದ್ಧತಿಯು ಸಮಾಜವನ್ನು ಅನಿಷ್ಠವಾಗಿ ಕಾಡುತ್ತಿದೆ ಅದರ ಬಗ್ಗೆ ಪ್ರತಿಯೊಬ್ಬನಿಗೂ ಅರಿವನ್ನು ಮೂಡಿಸುವುದು ಹಾಗೂ ಇದರ ಬಗ್ಗೆ ತಿಳುವಳಿಕೆ ಹೊಂದುವಂತೆ ಮಾಡುವುದು ಬಹು ಮುಖ್ಯವಾಗಿದೆ ಎಂದು ಶಿಕ್ಷಕ ತೌಸೀಫ್ ಅಹ್ಮದ್ ಹೇಳಿದರು.
ಶುಕ್ರವಾರ ಮಜಿ ವೀರಕಂಭದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕ ವಿರೋಧಿ ವಿಷಯದ ಬಗ್ಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೇಸ್ ಮಂಡೋನ್ಸ ಹಾಗೂ ಶಿಕ್ಷಕ ವೃಂದ, ಶಾಲಾ ನಾಯಕ ಮೊಹಮ್ಮದ್ ಹಾರೂನ್ ಫರ್ಹಾನ್, ಶಾಲಾ ಮಂತ್ರಿಮಂಡಲದ ಸದಸ್ಯರು, ಶಾಲಾ ವಿವಿಧ ಸಂಘಗಳ ವಿದ್ಯಾರ್ಥಿಗಳು ಹಾಜರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ಸ್ವಾಗತಿಸಿ, ಶಿಕ್ಷಕಿ ಸಂಪ್ರಿಯ ವಂದಿಸಿದರು. ಹಿರಿಯ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು.