ಅಡುಗೆ ಅನಿಲ ಬೆಲೆ ಏರಿಕೆ, ವಿತರಣೆ ವಿಳಂಬ ನೀತಿ ವಿರೋಧಿಸಿ ವಿಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ

VNR GOLD

ಬಂಟ್ವಾಳ: ಗ್ಯಾಸ್ ಸಿಲಿಂಡರ್‌ಗಳ ನಿರಂತರ ಬೆಲೆ ಏರಿಕೆ ಹಾಗೂ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್‌ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಬಿಸಿ ರೋಡ್  ಫ್ಲೈಓವರ್  ಕೆಳಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.

ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಘೋಷಣೆ ಕೂಗಿ, ಗೃಹಬಳಕೆಯ ಗ್ಯಾಸ್  ದರವನ್ನು ಕಡಿಮೆಗೊಳಿಸುವಂತೆ ಹಾಗೂ ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಸಿಲಿಂಡರ್ ವಿತರಣೆ ಮಾಡುವಂತೆ ಆಗ್ರಹಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಂ  ಮಾತನಾಡಿ , ಕೇಂದ್ರ ಬಿಜೆಪಿ ಸರ್ಕಾರ ಮಹಿಳೆಯರ , ಬಡವರ  ಶೋಷಣೆಯೇ ದೇಶದ ಅಭಿವೃದ್ದಿ ಎಂದು ಪರಿಗಣಿಸಿದೆ. ನಿರಂತರವಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ ಎಂದರು

ಜಾಹೀರಾತು

ಎಸ್.ಡಿ.ಪಿ.ಐ. ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಗೂಡಿನಬಳಿ ಮಾತನಾಡಿ , ವಿಶ್ವ ಗುರುವಿನ ಶೀರ್ಷಿಕೆಯಡಿ ಮೋದಿ ಸರ್ಕಾರವು ಕಾರ್ಪೋರೇಟ್ ಕುಳಗಳನ್ನು ಅಭಿವೃದ್ದಿಗೊಳಿಸಿ  ಬಡವರನ್ನು ಮತ್ತಷ್ಟು ಬಡತನಕ್ಕೆ ತಳ್ಳುವ ವಂಚನೆಯ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು . ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶಿನೀರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನ ಪಾಣೆಮಂಗಳೂರು ಉಪಸ್ಥಿತರಿದ್ದರು.  ಜಿಲ್ಲಾ ಸಮಿತಿ ಸದಸ್ಯೆ ಸಾಜಿದಾ ಸ್ವಾಗತಿಸಿ, ಫಾತಿಮಾ ನುಸೈಬಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

Be the first to comment on "ಅಡುಗೆ ಅನಿಲ ಬೆಲೆ ಏರಿಕೆ, ವಿತರಣೆ ವಿಳಂಬ ನೀತಿ ವಿರೋಧಿಸಿ ವಿಮೆನ್ ಇಂಡಿಯಾ ಮೂವ್ ಮೆಂಟ್ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*