ಬಂಟ್ವಾಳ

Panemangalore: ಸರ್ವೀಸ್ ರಸ್ತೆಯಲ್ಲಿ ಹೊಂಡ, ಪ್ರಯಾಣಿಕರಿಗೆ ಸಮಸ್ಯೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗ ಸಮರ್ಪಕವಾಗಿ ಕಾಂಕ್ರೀಟ್ ಹಾಕದೆ ಇರುವ ಕಾರಣ ಹೊಂಡ ಕಾಣಿಸಿಕೊಂಡಿದ್ದು, ಇದರಿಂದ ಪಾದಚಾರಿಗಳಿಗಷ್ಟೇ ಅಲ್ಲ, ವಾಹನ ಸವಾರರಿಗೂ ತೊಂದರೆ ಆಗುತ್ತಿದೆ.

VNR GOLD

ಹೆದ್ದಾರಿ ಕಾಮಗಾರಿಯ ವೇಳೆ ಅಗೆದಿರುವ ರಸ್ತೆಗೆ ಕಾಂಕ್ರೀಟ್ ಹಾಕದೆ ಇರುವ ಕಾರಣದಿಂದ ಮಳೆಗಾಲ ಆರಂಭದಲ್ಲೇ ಬೃಹತ್ ಗಾತ್ರದ ಹೊಂಡಗುಂಡಿಗಳು ಕಾಣಿಸುತ್ತಿದೆ. ಹೊಂಡದಲ್ಲಿ ಬಿದ್ದ ವಾಹನಗಳು ಎದ್ದೇಳಲು ಸಾಧ್ಯವಾಗದೆ ಹರಸಾಹಸ ಪಡುವ ದೃಶ್ಯಗಳು ಕಂಡುಬಂದಿವೆ. ದ್ವಿಚಕ್ರವಾಹನ ಸವಾರರಂತೂ ರಾತ್ರಿ ವೇಳೆ ಗುಂಡಿಗೆ ಬಿದ್ದು ಪ್ರಾಣಕ್ಕೆ ಅಪಾಯವಾಗುವ ಸಂಭವ ಜಾಸ್ತಿ ಇವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.