ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕ ಹಾಗೂ ಶ್ರುತಿ ಆರ್ಟ್ಸ್ ಕಾವಳಕಟ್ಟೆ ಆಶ್ರಯದಲ್ಲಿ ಯಕ್ಷಗಾನ ಬಣ್ಣಗಾರಿಕೆ ತರಬೇತಿ ಶಿಬಿರ ಭಾನುವಾರ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಂಗಣದಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಉಪಾಧ್ಯಕ್ಷ, ಹಿರಿಯ ಯಕ್ಷಗಾನ ಕಲಾವಿದ ದಿವಾಕರ ದಾಸ್ ಕಾವಳಕಟ್ಟೆ ಅವರು ಶಿಬಿರ ಉದ್ಘಾಟಿಸಿ, ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಹರೀಂದ್ರ ಟಿ.ಪೈ ಅವರು ಅಧ್ಯಕ್ಷತೆ ವಹಿಸಿದ್ದರು.
ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳೆಕ್ಕಿನಕೋಡಿ, ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಮಹಿಳಾ ಘಟಕದ ಗೌರವಾಧ್ಯಕ್ಷೆ ಉಮಾ ಡಿ. ಗೌಡ, ಅಧ್ಯಕ್ಷೆ ಶಶಿಕಲಾ ಗೋಪಾಲ ಪೂಜಾರಿ, ಯಕ್ಷಗುರು ಸಾಯಿಸುಮಾ ನಾವಡ ಕಾರಿಂಜ, ಪದಾಧಿಕಾರಿಗಳಾದ ಶೋಭಾ ಶೆಟ್ಟಿ, ಚಂದ್ರ ಶೇಖರ ಶೆಟ್ಟಿ, ವಿನೋದ್, ಸುರೇಶ ಶೆಟ್ಟಿ ಮಜಲೋಡಿ, ಅಜಿತ್ ಶೆಟ್ಟಿ ಕಾರಿಂಜ ಪ್ರಧಾನ ಕಾರ್ಯದರ್ಶಿ ಸತೀಶ್ ಆಚಾರ್ಯ ಬೆರ್ಕಳ ಮತ್ತಿತರರು ಉಪಸ್ಥಿತರಿದ್ದರು. ಯಕ್ಷಗಾನ ಕಲಾವಿದರಾದ ದಿವಾಕರ ದಾಸ್, ಪ್ರಭಾಕರ ಶೆಟ್ಟಿ ತೆಂಕಕಾರಂದೂರು, ಶಶಿಧರ ಬಾಚಕೆರೆ , ಸಾಯಿಸುಮಾ ನಾವಡ ಬಣ್ಣಗಾರಿಕೆ ತರಬೇತಿ ನೀಡಿದರು. ವಿನಯಾ ಪ್ರಾರ್ಥಿಸಿದರು. ರತ್ನದೇವ್ ಪುಂಜಾಲಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.