ಮಳೆಮಾಪಕ ಸರಿ ಇಲ್ಲದಿದ್ದರೆ, ಹತ್ತಿರದ ಪಂಚಾಯಿತಿ ವರದಿ ಪರಿಗಣನೆ, ತಾಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿ ಮಾಹಿತಿ

ಬೆಳೆವಿಮೆ ಮೌಲ್ಯಮಾಪನಕ್ಕೆ  ಮಳೆಮಾಪಕ ಸರಿ ಇಲ್ಲದಿದ್ದರೆ ಹತ್ತಿರದ ಎರಡು ಪಂಚಾಯತ್ ಗಳ ವರದಿ ಪರಿಗಣನೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ ಹೇಳಿದ್ದಾರೆ.

VNR GOLD

ಬಂಟ್ವಾಳ ತಾ.ಪಂ. ಆಡಳಿತಾಧಿಕಾರಿ ಇಬ್ರಾಹಿಂ ದೊಡ್ಡಮನಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಅವರು ಮಳೆಮಾಪಕಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂಬ ಬಗ್ಗೆ ದೂರುಗಳ ಕುರಿತು ಪ್ರಸ್ತಾವಿಸಿ, ಈ ಕುರಿತು ಪರಿಶೀಲನೆ ನಡೆಸುವಂತೆ ಸೂಚಿಸಿದರು.

KDP MEETING AT BANTWAL

ಈ ವೇಳೆ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜಾ ಉತ್ತರಿಸಿ ಬಂಟ್ವಾಳ ಗ್ರಾ.ಪಂ ಮಟ್ಟದಲ್ಲಿ ಮಳೆ ಮಾಪಕ ಸರಿ ಇಲ್ಲದಿದ್ದರೂ ಪಕ್ಕದ ಎರಡು  ಪಂಚಾಯತ್ ಗಳ ವರದಿಯನ್ನು ಪರಿಗಣಿಸಿ ಬೆಳೆ ವಿಮೆ ಸಂದರ್ಭ ಪರಿಗಣಿಸಲು ಅವಕಾಶ ಇದೆ ಎಂದರು. 

ಜಾಹೀರಾತು

ತಾಲೂಕು ಮಟ್ಟದಲ್ಲಿ ಅಧಿಕಾರಿಗಳಿಗೆ ಬರುವ ಎಲ್ಲಾ ಸಾರ್ವಜನಿಕ ದೂರು ದುಮ್ಮಾನಗಳಿಗೆ ಪ್ರಥಮವಾಗಿ ಸ್ಪಂದಿಸಬೇಕು. ತಮ್ಮ ವ್ಯಾಪ್ತಿಯಲ್ಲಿಯೇ ಅದಕ್ಕೆ ಪರಿಹಾರ ಒದಗಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು. ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು ಎಂದು ತಾಪಂ ಆಡಳಿತಾಧಿಕಾರಿ ಇಬ್ರಾಹಿಂ ದೊಡ್ಡಮಣಿ ಹೇಳಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಳೆಮಾಪಕ ಸರಿ ಇಲ್ಲದಿದ್ದರೆ, ಹತ್ತಿರದ ಪಂಚಾಯಿತಿ ವರದಿ ಪರಿಗಣನೆ, ತಾಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿ ಮಾಹಿತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*