COURTESY INTERNET IMAGES
ಬಂಟ್ವಾಳ: ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಬಂಟ್ವಾಳ ಎಸ್.ವಿ.ಎಸ್. ದೇವಳ ಶಾಲೆಯ ಯು.ಕೆ.ಜಿ. ವಿದ್ಯಾರ್ಥಿನಿ ಹರ್ನಿಕಾ (5) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ನಿಧನ ಹೊಂದಿದ್ದಾಳೆ. ತಂದೆ ಪ್ರಜ್ವಲ್, ತಾಯಿ ಛಾಯಾ ಅವರಿಗೆ ಇವಳು ಒಬ್ಬಳೇ ಮಗಳು.ಅಲ್ಲಿಪಾದೆಯಲ್ಲಿ ತನ್ನ ಅಜ್ಜಿ ಮನೆಯಿಂದ ಶಾಲೆಗೆ ಬರುತ್ತಿದ್ದ ಈ ಪುಟ್ಟ ಬಾಲಕಿಯನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಬೆಳಗ್ಗೆ ಬಾಲಕಿ ನಿಧನ ಹೊಂದಿದ್ದಾಗಿ ವೈದ್ಯರು ತಿಳಿಸಿದ್ದಾರೆ.ಮೃತಳ ಗೌರವಾರ್ಥ ಬಂಟ್ವಾಳ ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಜೆ ಸಾರಲಾಗಿತ್ತು ಮೃತಳ ಮನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಸಾಂತ್ವನ ಹೇಳಿದರು.