ಬಂಟ್ವಾಳ

ಪ್ರೊ. ಬಾಲಕೃಷ್ಣ ಗಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆ, ನುಡಿನಮನ

ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಗಟ್ಟಿ ಅವರ ಶ್ರದ್ಧಾಂಜಲಿ ಸಭೆ, ನುಡಿನಮನ ಕಾರ್ಯಕ್ರಮ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಸಂಜೆ ನಡೆಯಿತು.

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ನುಡಿನಮನ ಸಲ್ಲಿಸಿ ತಾನು ಎಸ್.ವಿ.ಎಸ್. ಕಾಲೇಜಿನಲ್ಲಿ ಸೇರ್ಪಡೆಯಾಗಲು ಪ್ರೊ.ಗಟ್ಟಿಯವರೇ ಕಾರಣ ಎಂದು ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು.

VNR GOLD

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಬಿ.ಎನ್.ಪುಷ್ಪರಾಜ್ ಮಾತನಾಡಿ ಮಾರ್ಗದರ್ಶನ ನೀಡಿದ್ದನ್ನು ಸ್ಮರಿಸಿದರು. ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಮಾತನಾಡಿ ತಾಲೂಕು ಪತ್ರಕರ್ತರ ಸಂಘದ ಸ್ಥಾಪನೆಯ ಕುರಿತು ಮಾತನಾಡಿದರು.

ಜಾಹೀರಾತು

ಹಿರಿಯ ಪತ್ರಕರ್ತ ವೆಂಕಟೇಶ ಬಂಟ್ವಾಳ ಅವರು ಗಟ್ಟಿಯ ರೊಂದಿಗೆ ವೃತ್ತಿಜೀವನವನ್ನು ನೆನಪಿಸಿಕೊಂಡರು. ಎಸ್.ವಿ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಪಾಂಡುರಂಗ ನಾಯಕ್ ಮಾತನಾಡಿ, ಪ್ರೊ.ಗಟ್ಟಿಯವರು ತನ್ನ ವೃತ್ತಿಗೆ ಮಾರ್ಗದರ್ಶಕರಾಗಿ ಇದ್ದುದನ್ನು ಸ್ಮರಿಸಿ, ಕಾಲೇಜಿನಲ್ಲಿ ಶಿಸ್ತನ್ನು ತಂದವರು, ಉತ್ತಮ ಆಡಳಿತಾಧಿಕಾರಿ ಆಗಿದ್ದರು ಎಂದರು.

ಬಾಲಕೃಷ್ಣ ಗಟ್ಟಿಯವರ ಪುತ್ರ ಸುಕುಮಾರ ಗಟ್ಟಿ ಮಾತನಾಡಿ ಕಾರ್ಯನಿರತ ಪತ್ರಕರ್ತರ ಸಂಘ ನುಡಿನಮನ ಕಾರ್ಯಕ್ರಮ ಏರ್ಪಡಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮೌನೇಶ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಸಾಲ್ಯಾನ್ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts