YOGA WITH YODHA: ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ, ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ ’ಯೋಗ ವಿದ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ ರಮಣೀಯ ಪ್ರದೇಶ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 21ರ ಭಾನುವಾರ ಅಪರಾಹ್ನ 3 ಗಂಟೆಗೆ  ನಡೆಯಲಿರುವ  3ನೇ ಆವೃತ್ತಿಯ ’ಯೋಗ ವಿದ್ ಯೋಧ’ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಸದರು ಸಾರ್ವಜನಿಕರಿಗೆ ಆಹ್ವಾನ ನೀಡಿದ್ದಾರೆ.

VNR GOLD

ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆರಂಭಗೊಂಡ ಅಂತರಾಷ್ಟ್ರೀಯ ಯೋಗ ದಿನಾಚರಣೆಯು, ವಿಶ್ವದಾದ್ಯಂತ 180ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲ್ಪಡುತ್ತಿದ್ದು, ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಈ ಬಾರಿಯ ಆಚರಿಸಲಾಗುತ್ತಿರುವ 12ನೇ ವಿಶ್ವ ಯೋಗ ದಿನದ ಧ್ಯೇಯವಾಕ್ಯವು “ಆರೋಗ್ಯಕರ ವಯಸ್ಸಿಗೆ ಯೋಗ”(Yoga for Healthy Ageing) ಆಗಿದ್ದು, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗದ ಪಾತ್ರ ಅಪಾರವಾಗಿದೆ. ಪ್ರಕೃತಿ ಸೌಂದರ್ಯದ ನಡುವೆ ಕಂಗೊಳಿಸುವ ಕಾರಿಂಜೇಶ್ವರ ಕ್ಷೇತ್ರದ ಬೆಟ್ಟದ ಆವರಣದಲ್ಲಿ ನಡೆಯಲಿರುವ ಯೋಗಪಟು ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಯೋಗಾಭ್ಯಾಸದಲ್ಲಿ, ವಿದ್ಯಾರ್ಥಿಗಳು, ನಿವೃತ್ತ ಯೋಧರು, ಗಣ್ಯರು, ಯೋಗಾಸಕ್ತರು ಹಾಗೂ ಸಾರ್ವಜನಿಕರು ಒಂದೇ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಕೃತಿಯ ಮಡಲಿನಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಆಧ್ಯಾತ್ಮಿಕ ಮತ್ತು ದೈಹಿಕ ಚೈತನ್ಯವನ್ನು ಪಡೆದುಕೊಳ್ಳಲು ಇದು ಅತ್ಯುತ್ತಮ ಅವಕಾಶವಾಗಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು

ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ‘ಯೋಗ ವಿದ್ ಯೋಧ’ ಕಾರ್ಯಕ್ರಮವನ್ನು ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಆಯೋಜಿಸಲಾಗುತ್ತಿದೆ. ಪ್ರಥಮ ಬಾರಿ ಸಾಹಸ ಜಲಕ್ರೀಡೆಗಳ ತಾಣವಾಗಿರುವ ಸಸಿಹಿತ್ಲುವಿನಲ್ಲಿ ಹಾಗೂ ಕಳೆದ ಬಾರಿ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಕಡಲ ಕಿನಾರೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಬಾರಿ ಸಮುದ್ರ ಮಟ್ಟದಿಂದ 1500 ಅಡಿ ಎತ್ತರದಲ್ಲಿರುವ ಕಾರಿಂಜ ಬೆಟ್ಟದಲ್ಲಿ ಆಯೋಜಿಸಲಾಗಿದ್ದು ಈ ಅದ್ಭುತ ಧಾರ್ಮಿಕ ಹಾಗೂ ಪ್ರವಾಸಿ ತಾಣವು ಜಾಗತಿಕ ಭೂಪಟದಲ್ಲಿ ಗುರುತಿಸಿಕೊಳ್ಳಬೇಕು ಎನ್ನುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಕರಾವಳಿಯ ಶ್ರೀಮಂತ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸುವ ಸಣ್ಣ ಪ್ರಯತ್ನ ಇದಾಗಿದೆ. ದೇಶ-ವಿದೇಶಗಳ ಪ್ರವಾಸಿಗರು ಈ ಪವಿತ್ರ ತಾಣಕ್ಕೆ ಭೇಟಿ ನೀಡುವಂತೆ ಪ್ರೇರೇಪಿಸಬೇಕು ಎಂದು ಸಂಸದ ಕ್ಯಾ.ಚೌಟ ಮನವಿ ಮಾಡಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "YOGA WITH YODHA: ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ, ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*