ಬಂಟ್ವಾಳ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥಾಪನಾ ದಿನಾಚರಣೆ

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ 18ನೇ ವರ್ಷದ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕಲ್ಲಡ್ಕ ಜಂಕ್ಷನ್‌ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಶೋಷಿತರು, ದಮನಿತರು ಹಾಗೂ ಸಮಾಜದ ಹಿಂದುಳಿದ ವರ್ಗಗಳ ಪರವಾಗಿ ರಾಜಕೀಯ ಹೋರಾಟದ ಮೂಲಕ ನ್ಯಾಯದ ಧ್ವನಿಯಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಮುಖ್ಯ ಭಾಷಣ ಮಾಡಿದ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೊಡಿ, ಪಕ್ಷದ ಸ್ಥಾಪನೆಯ ಉದ್ದೇಶಗಳು ಹಾಗೂ ಜನಪರ ಹೋರಾಟಗಳ ಬಗ್ಗೆ ವಿವರಿಸಿದರು. ರಾಜ್ಯ ಸಮಿತಿಯ ಸದಸ್ಯರಾದ ಸಿದ್ದಿಕ್ ಕಲ್ಲಡ್ಕ, ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಇಕ್ಬಾಲ್ ಇಝಾನ್,  ಕ್ಷೇತ್ರ ಸಮಿತಿಯ ಸದಸ್ಯರಾದ ಬಶೀರ್ ಬೊಳ್ಳಾಯಿ, ಯಾಶೀರ್ ಕಲ್ಲಡ್ಕ, ಕಲ್ಲಡ್ಕ ಬ್ಲಾಕ್ ಸಮಿತಿಯ ಅಧ್ಯಕ್ಷ ಸತ್ತಾರ್ ಕಲ್ಲಡ್ಕ, ಕಾರ್ಯದರ್ಶಿ ಅನ್ವರ್ ಆಲಡ್ಕ, ಗೋಳ್ತಮಜಲು ಗ್ರಾಮ ಸಮಿತಿಯ ಅಧ್ಯಕ್ಷ ಜವಾಝ್ ಕಲ್ಲಡ್ಕ ಹಾಗೂ ಸಜಿಪ ಮುನ್ನೂರು ಗ್ರಾಮ ಸಮಿತಿಯ ಅಧ್ಯಕ್ಷ ಆಸಿಫ್ ನಂದಾವರ ಉಪಸ್ಥಿತರಿದ್ದರು.  ಹಮೀದ್ ಅಲಿ ಸ್ವಾಗತಿಸಿದರು. ಮನ್ಸೂರ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕ್ಷೇತ್ರ ವ್ಯಾಪ್ತಿಯ ನಂದಾವರ, ಪೆರಾಜೆ, ಆಲಂಪಾಡಿ, ಪಾಂಡವರಕಲ್ಲು, ಕಾವಳಕಟ್ಟೆ, ಬಂಟ್ವಾಳ ಕೆಳಗಿನ ಪೇಟೆ, ಅಕ್ಕರಂಗಡಿ, ಗೂಡಿನಬಳಿ, ಕುಮೇರು, ಲೊರೆಟ್ಟೋಪದವು, ರಂಗೇಲು, ಆಲಡ್ಕ, ತಲಪಾಡಿ, ಕಲಾಯಿ, ಪರ್ತಿಪ್ಪಾಡಿ, ಬೊಳಂತೂರು, ಕಡಂಬು, ಮಂಚಿ, ಕರೋಪಾಡಿ ಹಾಗೂ ತಾಳಿತ್ತನೂಜಿ ಪ್ರದೇಶದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಜಾಹೀರಾತು
VNR GOLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts