ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಿಮಿಯಂ ಪ್ರಾರಂಭ, ಸದುಪಯೋಗ ಪಡೆದುಕೊಳ್ಳಲು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಪ್ರಭಾಕರ ಪ್ರಭು ಮನವಿ

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷೆ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು 2026-27  ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂದಿಸಿದಂತೆ ತೋಟಗಾರಿಕೆ ಇಲಾಖೆ ಜಾರಿಗೊಳಿಸಿದೆ.

VNR GOLD

ಇದರ ಸದುಪಯೋಗ ಪಡೆಯಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ ,ಕರಿಮೆಣಸು , ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆವಿಮೆ ಮಾಡಲು ಪ್ರಿಮಿಯಂ ಪಾವತಿಸಲು ಪ್ರಾರಂಭವಾಗಿದ್ದು , ಬೆಳೆಸಾಲ ಪಡೆದಿರುವ ರೈತರು ತಾವು ಬೆಳೆ ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕ ಮಾಡಿ ನೋಂದಾವಣೆ ಮಾಡಿಸಿ ಪ್ರಿಮಿಯಂ ಮೊತ್ತ ಪಾವತಿಸಬಹುದಾಗಿದೆ . ಬೆಳೆ ಸಾಲ ಹೊಂದಿಲ್ಲದ ರೈತರು ಸಹ  ಈ ಯೋಜನೆಯಡಿಯಲ್ಲಿ ಪ್ರಿಮಿಯಂ ಮೊತ್ತ ಪಾವತಿಸಿ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ .ರೈತರು ತಾವು ಬೆಳೆದ ಬೆಳೆಗಳನ್ನು ಬೆಳೆ ಸಮೀಕ್ಷೆ ಮಾಡಿಸಬೇಕು ಹಾಗೂ ಫಾರ್ಮರ್ ಐಡಿ ಹೊಂದಿರಬೇಕು ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಎಕರೆ ಒಂದಕ್ಕೆ ರೂ 2591 ಮತ್ತು ಕರಿಮೆಣಸು ಎಕರೆ ಒಂದಕ್ಕೆ ರೂ 951 ವಿಮೆ ಕಂತು ಪಾವತಿಸಬೇಕಾಗುತ್ತದೆ ಎಂದವರು ಮಾಹಿತಿ ನೀಡಿದ್ದಾರೆ

ಜಾಹೀರಾತು

ಈ ಯೋಜನೆಯ ನೋಂದಾವಣಿಗೆ ಜುಲೈ 31 ಕೊನೆಯ ದಿನಾಂಕವಾಗಿದ್ದು , ಬೆಳೆಸಾಲ ಪಡೆದಿರುವ ಎಲ್ಲಾ ರೈತ ಬಾಂದವರು ಜಮೀನಿನ ಆರ್.ಟಿ.ಸಿ ಯೊಂದಿಗೆ ಆಧಾರ್ ಕಾರ್ಡ್ , ಬ್ಯಾಂಕ್ ಪುಸ್ತಕ ಹಾಗೂ ನಾಮಿನಿಯ ಆಧಾರ್ ನೊಂದಿಗೆ ನಿಗದಿತ ಅವಧಿಯೊಳಗೆ ತಮ್ಮ ಕಾರ್ಯ ವ್ಯಾಪ್ತಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಚೇರಿಗಳನ್ನು ಸಂಪರ್ಕಿಸಿ ಬೆಳೆವಿಮೆ ಯೋಜನೆ ಪ್ರಯೋಜನ ಪಡೆಯಬೇಕೆಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಮೂಲಕ ರೈತರಿಗೆ ವಿನಂತಿ ಮಾಡಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಿಮಿಯಂ ಪ್ರಾರಂಭ, ಸದುಪಯೋಗ ಪಡೆದುಕೊಳ್ಳಲು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಪ್ರಭಾಕರ ಪ್ರಭು ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*