
ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು.

ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆ ವಹಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಎನ್. ಅಶೋಕ್ ಕುಮಾರ್ ಪಡ್ಪು ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ದ.ಕ ಸಂಸದ ಕ್ಯಾ| ಬ್ರಿಜೇಶ್ ಚೌಟ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಅಗಮಿಸಿ ಶುಭ ಹಾರೈಸಿಸಿದರು ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು.
ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಕಿರಣ್‌ರಾಜ್ ಪೂಂಜರೆಕೋಡಿ ಸರ್ವರ ಸಹಕಾರ ಕೋರಿದರು. ಫಾದರ್ ಮುಲ್ಲರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ. ಉಜ್ವಲ್ ಯು. ಸುವರ್ಣ ಹಾಗೂ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ಸನ್ನಿಧಿ ಸೇವಾ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಕೊಂಕಣಪದವು ಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಳೆದ 11 ವರ್ಷಗಳಿಂದ ಯುವವಾಹಿನಿ ಬಂಟ್ವಾಳ ಘಟಕದ ಕಚೇರಿಗೆ ಸ್ಥಳಾವಕಾಶ ಒದಗಿಸಿ ಸಹಕರಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೇಶ್ ಬಿ. ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ ಹಾಗೂ ಕೋಶಾಧಿಕಾರಿ ನವೀನ್ ಪೂಜಾರಿ ಅವರನ್ನು ಗೌರವಿಸಲಾಯಿತು.
ಕಾರ್ಯದರ್ಶಿ ಮಧುಸೂದನ್ ಮದ್ವ ವಾರ್ಷಿಕ ವರದಿಯನ್ನು ಮಂಡಿಸಿದರು. ನೂತನ ಕಾರ್ಯದರ್ಶಿ ಗೀತಾ ಜಗದೀಶ್ ಧನ್ಯವಾದ ಸಲ್ಲಿಸಿದರು. ಮಲ್ಲಿಕಾ ಜ್ಯೋತಿಗುಡ್ಡೆ ಕಾರ್ಯಕ್ರಮ ನಿರೂಪಿಸಿದರು.


Be the first to comment on "ಯುವವಾಹಿನಿ ಬಂಟ್ವಾಳ ಘಟಕ ಪದಗ್ರಹಣ"