ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕುಂಭಶ್ರೀ ಪದವಿ ಪೂರ್ವ ಕಾಲೇಜು ವೇಣೂರಿನ ಪ್ರಿನ್ಸಿಪಾಲ್ ಶ್ರೀನಿವಾಸ ನಾಯ್ಕ ನೆರವೇರಿಸಿದರು.
ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಭಾಕರ ಪ್ರಭು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ತನಗೆ ಸಿಕ್ಕಿದ ಅವಕಾಶವನ್ನು ಜವಾಬ್ದಾರಿ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ಕೊಂಡು, ಪರಿಶುದ್ಧವಾದ ಮಾತುಗಳಿಂದ ಸಮಾಜದೊಂದಿಗೆ ಬೆರೆತಾಗ ನಾಯಕತ್ವದ ಗುಣಗಳನ್ನು ಬೆಳೆಸಲು ಸಾಧ್ಯ ಎಂದರು.
ಕಾಲೇಜಿನ ಪ್ರಿನ್ಸಿಪಾಲ್ ಉದಯಕುಮಾರ್ ಪ್ರಮಾಣವಚನ ಬೋಧಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಭಾಸ್ಕರ ಎಂ ಸ್ವಾಗತಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕಿ ರೇಖಾ ಬಾಳಿಗಾ ಅತಿಥಿಗಳ ಪರಿಚಯ ಮಾಡಿದರು. ಉಪನ್ಯಾಸಕ ಸಂಜಯ್ ಬಿ ಎಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.