ಬಂಟ್ವಾಳ: ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯಿತು.

ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಬಂಟ್ವಾಳ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಮಾತನಾಡಿ, ಕೆಂಪೇಗೌಡರು ನಾಡು ಕಟ್ಟಿದವರು, ಇಂದು ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲು ಅವರ ಕೊಡುಗೆಗಳು ಕಾರಣ, ಬೆಂಗಳೂರನ್ನು ನಿರ್ಮಿಸುವ ಮೂಲಕ ಮಾದರಿ ನಗರವೊಂದನ್ನು ಸೃಷ್ಟಿಸಿ ಜಗತ್ತಿನ ಗಮನ ಸೆಳೆಯುವಂತೆ ಮಾಡಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು ಮಾತನಾಡಿ, ಬೆಂಗಳೂರನ್ನು ತಮ್ಮ ದೂರದೃಷ್ಟಿಯ ಚಿಂತನೆ ಮೂಲಕ ವ್ಯವಸ್ಥಿತವಾಗಿ ನಿರ್ಮಿಸಿದ ಕೆಂಪೇಗೌಡರು ನಾಡಪ್ರಭು ಎಂಬ ಹೆಸರಿನೊಂದಿಗೆ ಗುರುತಿಸಿಕೊಂಡವರು ಎಂದು ಅವರ ಕೊಡುಗೆಯನ್ನು ಸ್ಮರಿಸಿದರು.

ಸಂಘದ ಉಪಾಧ್ಯಕ್ಷರಾದ ವೆಂಕಪ್ಪ ಗೌಡ, ತನಿಯಪ್ಪ ಗೌಡ ಉಪಸ್ಥಿತರಿದ್ದು ಶುಭ ಹಾರೈಸಿದರು. ಜೇನು ಕೃಷಿಯಲ್ಲಿ ಸಾಧನೆ ಮಾಡಿದ ಇಡ್ಕಿದು ಗ್ರಾಮದ ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಹಬ್ಬಗಳ ವಿಷಯ ನಿರ್ವಾಹಕ ವಿಷುಕುಮಾರ್, ಕಚೇರಿ ಸಿಬಂದಿ ಮತ್ತು ಗ್ರಾಮ ಆಡಳಿತಾಧಿಕಾರಿ, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಗ್ರಾಮಸಹಾಯಕರಾದ ಜನಾರ್ಧನ ಕಾರ್ಯಕ್ರಮ ನಿರ್ವಹಿಸಿದರು.


Be the first to comment on "ಬಂಟ್ವಾಳ: ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ"