ದಕ್ಷಿಣ ಕನ್ನಡ ಜಿಲ್ಲಾ ಆಟೊರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಗಳ ಒಕ್ಕೂಟದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಬಳಿ ನಿಯೋಗವೊಂದು ಅಧ್ಯಕ್ಷ ವಿಶ್ವನಾಥ ಚಂಡ್ತಿಮಾರ್ ನೇತೃತ್ವದಲ್ಲಿ ಭೇಟಿಯಾಗಿ ಬೇಡಿಕೆಗಳ ಪಟ್ಟಿಯುಳ್ಳ ಮನವಿ ಸಲ್ಲಿಸಿತು.
ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ರಿಕ್ಷಾಗಳ ಪಾರ್ಕನ್ನು ಈ ಮೊದಲಿನಂತೆ ಪ್ರಾರಂಭಿಸಲು ಅವಕಾಶ ಕಲ್ಪಿಸುವಂತೆ ಕೋರಲಾಯಿತು.
ಈ ಪಾರ್ಕಿಂಗ್ ನ ಮೂಲಕ ಆಟೊಗಳು ಪಾಣೆಮಂಗಳೂರು ಹಾಗೂ ಬಂಟ್ವಾಳಕ್ಕೆ ಸರ್ವೀಸ್ ಮಾಡುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿದ್ದು, ಇಲ್ಲಿ ಆಟೊ ಪಾರ್ಕಿಂಗ್ ಇದ್ದುದರಿಂದ ಬಸ್ಸಿನಿಂದ ಇಳಿದು ಬಂಟ್ವಾಳ ಹಾಗೂ ಪಾಣೆಮಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುತ್ತಿತ್ತು. ಆದ್ದರಿಂದ ಈ ಹಿಂದಿನಂತೆ ಈ ಪ್ರದೇಶದಲ್ಲಿ ರಿಕ್ಷಾ ಪಾರ್ಕಿಂಗ್ ಪ್ರಾರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.