ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ಕಾರ್ಯಕ್ರಮ ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ಆರಂಭಗೊಂಡಿತು. ಬಂಟ್ವಾಳ ಬಿ.ಮೂಡ ಗ್ರಾಮದ ಬಸ್ತಿಪಡ್ಪುವಿನ ಚೆನ್ನಮ್ಮ ಕುಟೀರ ನಿವಾಸದಲ್ಲಿ ವಾಸ್ತವ್ಯವಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಬಿ.ಜನಾರ್ದನ ಪೂಜಾರಿ ಅವರಿಗೆ ಮೊದಲನೇ ಎನಿಮೇಷನ್ ಫಾರ್ಮ್ ಅನ್ನು ವಿತರಿಸಲಾಯಿತು. ಸಮೀಕ್ಷೆಯ ವೈಖರಿ ಕುರಿತು ಮಾಜಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ಚುನಾವಣಾ ಶಾಖೆ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಬಿ.ಎಲ್.ಎ. ಸುನೀಲ್ ಕುಮಾರ್ ಭಂಡಾರಿಬೆಟ್ಟು, ಮೇಲ್ವಿಚಾರಕರಾದ ಗ್ರಾಮ ಆಡಳಿತ ಅಧಿಕಾರಿ ಯಶ್ವಿತಾ, ಮತಗಟ್ಟೆ ಅಧಿಕಾರಿ ದಾಮೋದರ ಪಡಿಯಾರ್ , ಕಚೇರಿ ಸಿಬ್ಬಂದಿ ಸದಾಶಿವ ಕೈಕಂಬ, ಅಕ್ಷತ್ ವಿಟ್ಲ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ತಾಲೂಕಿನಲ್ಲಿ ಮತದಾರ ಪಟ್ಟಿ ಸಮಗ್ರ ಪರೀಶೀಲನೆಗೆ ಚಾಲನೆ: ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರಿಗೆ ಫಾರ್ಮ್ ನೀಡುವ ಮೂಲಕ ಪ್ರಾರಂಭ"
Be the first to comment on "ಬಂಟ್ವಾಳ ತಾಲೂಕಿನಲ್ಲಿ ಮತದಾರ ಪಟ್ಟಿ ಸಮಗ್ರ ಪರೀಶೀಲನೆಗೆ ಚಾಲನೆ: ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರಿಗೆ ಫಾರ್ಮ್ ನೀಡುವ ಮೂಲಕ ಪ್ರಾರಂಭ"