ಪ್ರಮುಖ ಸುದ್ದಿಗಳು

ಮಂಗಳೂರಿನಲ್ಲಿ ದುರಂತ: ಮನೆ ಕುಸಿದು ಮೂವರ ದಾರುಣ ಅಂತ್ಯ – ವಿವರಗಳು ಇಲ್ಲಿವೆ

ಮಂಗಳೂರು: ಬುಧವಾರ ನಸುಕಿನ ಜಾವ ನಡೆದ ಘಟನೆಯಲ್ಲಿ ಮಳೆಯಿಂದ ಧರೆ ಮನೆಗೆ ಬಿದ್ದು, ಮನೆ ಕುಸಿದು ಅದರಡಿಯಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಅನಾಮಿಕ  ಚೌರಾಸಿಯ  (8), ಪರಿ (4), ಶಾಂತಾ (46) ಮೃತಪಟ್ಟರೆ, ಅಗ್ನಿಶಾಮಕ ದಳ ಮತ್ತು ಸಾರ್ವಜನಿಕರು ಸೇರಿ ಮಾಡಿದ ರಕ್ಷಣಾ ಕಾರ್ಯದಲ್ಲಿ ಅಲ್ಕಾ  (14), ಅನುಷಾ (11), ಬಾಲಕೃಷ್ಣ (48) ಅವರನ್ನು ಸುರಕ್ಷಿತವಾಗಿ ಹೊರಗೆ ತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮೂಲತ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ  ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಭಾಗದಲ್ಲಿ  ಕಳೆದ 20 ವರ್ಷಗಳಿಂದ ಈ ಕುಟುಂಬ ವಾಸ ಮಾಡಿಕೊಂಡಿದೆ.

ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಸಹಿತ ಅಧಿಕಾರಿಗಳು ಭೇಟಿ ನೀಡಿದರು.

ಜಾಹೀರಾತು

ನಾಗೂರಿ ದುರಂತ: ಸಚಿವ ಖಾದರ್ ದೆಹಲಿ ಪ್ರವಾಸ ಮೊಟಕು

ನಗರದ ನಾಗೂರಿಯಲ್ಲಿ ಮನೆ ಕುಸಿದು ಮೂವರು ಸಾವನ್ನಪ್ಪಿದ ಘಟನೆಯ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ಭೇಟಿಯನ್ನು ಮೊಟಕುಗೊಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಚಿವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚಿಸಿದರು.
ಗಾಯಾಳುಗಳಿಗೆ ಸರಕಾರದ ವತಿಯಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ಹಾಗೂ ಮೃತರ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಅವರು ನಿರ್ದೇಶಿಸಿದ್ದಾರೆ.ಸಚಿವರು ಇಂದು ಮಧ್ಯಾಹ್ನ ಮಂಗಳೂರು ತಲುಪಲಿದ್ದಾರೆ.

VNR GOLD

ಮಂಗಳೂರು ಕಂಕನಾಡಿ ಸಮೀಪ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮನೆ ಮೇಲ್ಛಾವಣಿಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟ ದುರ್ಘಟನೆ ಅತ್ಯಂತ ವಿಷಾದನೀಯವಾಗಿದೆ. ಈ ದುರಂತಕ್ಕೆ ಸಚಿವ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಆರೋಗ್ಯ ಇಲಾಖೆಯ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಗೆ ತೆರಳಿರುವ ಸಚಿವರು, ಈ ದುಃಖದ ಸುದ್ದಿ ತಿಳಿದ ತಕ್ಷಣ ಮಂಗಳೂರು ಕಡೆಗೆ ಪ್ರಯಾಣಿಸಲು ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಬಳಿ ಮಾತನಾಡಿರುವ ಸಚಿವ ಖಾದರ್ ಗಾಯಾಳುಗಳ ಚಿಕಿತ್ಸೆಗೆ ಸರಕಾರದಿಂದಲೇ ವೆಚ್ಚ ಭರಿಸಲು,ಮೃತಪಟ್ಟ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಸೂಚನೆ ನೀಡಿದ್ದಾರೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ಸಿಬ್ಬಂದಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಬುಧವಾರ ನಸುಕಿನ ಜಾವ ನಡೆದ ಘಟನೆಯಲ್ಲಿ ಮಳೆಯಿಂದ ಧರೆ ಮನೆಗೆ ಬಿದ್ದು, ಮನೆ ಕುಸಿದು ಅದರಡಿಯಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಅನಾಮಿಕ  ಚೌರಾಸಿಯ  (8), ಪರಿ (4), ಶಾಂತಾ (46) ಮೃತಪಟ್ಟರೆ, ಅಗ್ನಿಶಾಮಕ ದಳ ಮತ್ತು ಸಾರ್ವಜನಿಕರು ಸೇರಿ ಮಾಡಿದ ರಕ್ಷಣಾ ಕಾರ್ಯದಲ್ಲಿ ಅಲ್ಕಾ  (14), ಅನುಷಾ (11), ಬಾಲಕೃಷ್ಣ (48) ಅವರನ್ನು ಸುರಕ್ಷಿತವಾಗಿ ಹೊರಗೆ ತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮೂಲತ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ  ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಭಾಗದಲ್ಲಿ  ಕಳೆದ 20 ವರ್ಷಗಳಿಂದ ಈ ಕುಟುಂಬ ವಾಸ ಮಾಡಿಕೊಂಡಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts