ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ಜುಲೈ 2ರಂದು ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ನೀರು ಇರುವ ತಗ್ಗು ಪ್ರದೇಶ, ಕೆರೆ, ನದೀ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಸೂಚಿಸಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ದರ್ಶನ್ ಸೂಚನೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಈ ಘೋಷಣೆ ಮಾಡಲಾಗಿದೆ.