ರೋಟರಿ ಕ್ಲಬ್ ಬಂಟ್ವಾಳದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4ರ ಶನಿವಾರ ಸಂಜೆ 7 ಗಂಟೆಗೆ ಬಿ ಎ ಸೋಮಯಾಜಿ ಮೆಮೋರಿಯಲ್ ರೋಟರಿ ಹಾಲ್ ಬಿ ಸಿ ರೋಡ್ ನಲ್ಲಿ ನಡೆಯಲಿದೆ.
ನೂತನ ಅಧ್ಯಕ್ಷರಾಗಿ ರವಿಚಂದ್ರ ಬಂಟ್ವಾಳ ಅವರು ಅಧಿಕಾರ ಸ್ವೀಕರಿಸಲಿದ್ದು, ಮಾಜಿ ಜಿಲ್ಲಾ ಗವರ್ನರ್ ರೊ. ವಿಕ್ರಮ್ ದತ್ತ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ತಂಡಕ್ಕೆ ಅಧಿಕಾರ ಹಸ್ತಾಂತರಿಸಲಿದ್ದಾರೆ.
2025-26ನೇ ಸಾಲಿನ ಅಧ್ಯಕ್ಷ ಬಸ್ತಿ ಮಾಧವ ಶೆಣೈ ಅವರ ನೇತೃತ್ವದಲ್ಲಿ ಕ್ಲಬ್ “ಡೈಮಂಡ್ ಪ್ಲಸ್” ಅತ್ಯುನ್ನತ ಪ್ರಶಸ್ತಿ ಸೇರಿದಂತೆ ಹಲವಾರು ಸಾಧನೆಗಳನ್ನು ಮಾಡಿದೆ. ನೂತನ ವರ್ಷದಲ್ಲಿ ರವಿಚಂದ್ರ ಬಂಟ್ವಾಳ ಅವರ ನೇತೃತ್ವದ ತಂಡ ರೋಟರಿಯ ಈ ವರ್ಷದ ಧ್ಯೇಯ ದಂತೆ ಶಾಶ್ವತ ಪರಿಣಾಮ ವನ್ನು ಸ್ರಷ್ಟಿಸುವ ಆಶಯದೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸಲಿದೆ. ಈ ಸಂದರ್ಭದಲ್ಲಿ ನೂತನ ಕಾರ್ಯದರ್ಶಿ ರವಿರಾಜ್ ಶೆಟ್ಟಿ, ಖಜಾಂಚಿ ಐತಪ್ಪ ಪೂಜಾರಿ ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಅಧಿಕಾರ ಸ್ವೀಕರಿಸಲಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ROTARY CLUB BANTWAL: ರೋಟರಿ ಕ್ಲಬ್ ಬಂಟ್ವಾಳ: ಅಧ್ಯಕ್ಷರಾಗಿ ರವಿಚಂದ್ರ ಬಂಟ್ವಾಳ ಆಯ್ಕೆ, 4ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ"
Be the first to comment on "ROTARY CLUB BANTWAL: ರೋಟರಿ ಕ್ಲಬ್ ಬಂಟ್ವಾಳ: ಅಧ್ಯಕ್ಷರಾಗಿ ರವಿಚಂದ್ರ ಬಂಟ್ವಾಳ ಆಯ್ಕೆ, 4ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ"