ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗರೂಕತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ವಸತಿ ಶಾಲೆಗಳಿಗೆ, ಪದವಿಪೂರ್ವ, ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿ) ಯಾವುದೇ ತರಗತಿ ನಡೆಸದಂತೆ ಆದೇಶಿಸಿ ಜುಲೈ 3ರಂದು ರಜೆ ಘೋಷಿಸಲಾಗಿದೆ. ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಲಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.