Bantwala: ಆಡಳಿತ ಸೌಧ ಆವರಣದಲ್ಲಿ ಅನಧಿಕೃತ ವಾಹನ ನಿಲುಗಡೆಗೆ ಬ್ರೇಕ್

ಬಿಸಿರೋಡಿನ ಆಡಳಿತ ಸೌಧದ ಆವರಣದಲ್ಲಿ ಅನಧಿಕೃತವಾಗಿ ಖಾಸಗಿ ವಾಹನಗಳನ್ನು ನಿಲುಗಡೆ ನಿರ್ಬಂಧಿಸಿ ತಹಸೀಲ್ದಾರ್ ಮಂಜುನಾಥ್ ಸೂಚನೆಯಂತೆ ಬಂಟ್ವಾಳ ಸಂಚಾರಿ ಪೊಲೀಸರು ಆಗಮಿಸಿದರು.

VNR GOLD

ಮಂಗಳವಾರದಿಂದಲೇ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಆಡಳಿತ ಸೌಧಕ್ಕೆ ಪ್ರತಿನಿತ್ಯ ವಿವಿಧ ಸರ್ಕಾರಿ ಕಚೇರಿಗಳಿಗೆ ನೂರಾರು ಸಾರ್ವಜನಿಕರು ಭೇಟಿ ನೀಡುತ್ತಾರೆ. ಆದರೆ ಆವರಣದೊಳಗೆ ಖಾಸಗಿ ವಾಹನಗಳನ್ನು ಮನಬಂದಂತೆ ನಿಲ್ಲಿಸಲಾಗುತ್ತಿರುವುದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ತುರ್ತು ಕೆಲಸಗಳಿಗೆ ಬರುವ ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಓಡಾಟ ನಡೆಸಲು ತೊಂದರೆ ಉಂಟಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕೆಲವರು ತಮ್ಮ ವಾಹನಗಳನ್ನು ಆಡಳಿತ ಸೌಧದ ಆವರಣದಲ್ಲಿ ನಿಲ್ಲಿಸಿ, ಅಲ್ಲಿಂದ ಮಂಗಳೂರು ಸೇರಿದಂತೆ ಇತರ ಪ್ರದೇಶಗಳಿಗೆ ತೆರಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರಿಂದ ದಿನವಿಡೀ ವಾಹನಗಳು ಆವರಣದಲ್ಲೇ ನಿಂತುಕೊಂಡಿದ್ದು, ಕಚೇರಿಗೆ ಬರುವ ಸಾರ್ವಜನಿಕರಿಗೆ ವಾಹನ ನಿಲುಗಡೆಗೆ ಸ್ಥಳಾವಕಾಶ ಸಿಗುತ್ತಿಲ್ಲ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಜಾಹೀರಾತು

ಆಡಳಿತ ಸೌಧದ ಆವರಣದಲ್ಲಿ ಇರುವ ‘ನೋ ಪಾರ್ಕಿಂಗ್’ ಪ್ರದೇಶಗಳಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಪೊಲೀಸ್ ಇಲಾಖೆ ಮೂಲಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ದಂಡ ವಿಧಿಸುವ ಕ್ರಮವೂ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ನೋ ಪಾರ್ಕಿಂಗ್ ಕಡೆ ನಿಲ್ಲಿಸಬೇಡಿ:

ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಆಡಳಿತ ಸೌಧದಲ್ಲಿ ನಿಗದಿಪಡಿಸಿರುವ ವಾಹನ ನಿಲುಗಡೆ ಸ್ಥಳಗಳಲ್ಲೇ ನಿಲ್ಲಿಸಬೇಕು. ‘ನೋ ಪಾರ್ಕಿಂಗ್’ ಫಲಕ ಅಳವಡಿಸಿರುವ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ವಾಹನ ನಿಲ್ಲಿಸಬಾರದು. ಸಾರ್ವಜನಿಕರು ಸಹಕರಿಸಿದರೆ ಆಡಳಿತ ಸೌಧದ ಆವರಣದಲ್ಲಿ ಸುಗಮ ವಾಹನ ಸಂಚಾರ ಹಾಗೂ ಉತ್ತಮ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ತಹಶೀಲ್ದಾರ್ ಮನವಿ ಮಾಡಿದ್ದಾರೆ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Bantwala: ಆಡಳಿತ ಸೌಧ ಆವರಣದಲ್ಲಿ ಅನಧಿಕೃತ ವಾಹನ ನಿಲುಗಡೆಗೆ ಬ್ರೇಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*