ಬಂಟ್ವಾಳ

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮಿ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮ, ಬಿ.ಸಿ.ರೋಡಿನಲ್ಲಿ ಮಾಹಿತಿ

ಶ್ರೀಧಾಮ ಮಾಣಿಲದ ಶ್ರೀ ದುರ್ಗಾಮಹಾಲಕ್ಷ್ಮಿ ಕ್ಷೇತ್ರದಲ್ಲಿ ಜುಲೈ 12ರಿಂದ ಆಗಸ್ಟ್ 28ರವರೆಗೆ ನಡೆಯಲಿರುವ ಸಾಮೂಹಿಕ ಶ್ರೀ ಮಹಾಲಕ್ಷ್ಮಿ ಪೂಜೆ ಹಾಗೂ ಆ. 28ರಂದು ನಡೆಯುವ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಸಮಾಜದಲ್ಲಿ ವಿವಿಧ ರೀತಿಯ ಅವಘಡಗಳು, ಮಾನಸಿಕ ಅಶಾಂತಿ ಹಾಗೂ ನೈತಿಕ ಮೌಲ್ಯಗಳ ಕುಸಿತ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮನುಷ್ಯ ಸೇವಿಸುವ ಆಹಾರದಲ್ಲಿಯೂ ರಾಸಾಯನಿಕಗಳ ಬಳಕೆಯಿಂದ ಆರೋಗ್ಯದ ಬಗ್ಗೆ ಅನುಮಾನಗಳು ಮೂಡುತ್ತಿವೆ. ಇಂತಹ ಸಂದರ್ಭ ಧರ್ಮ, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ಕಾರ್ಯ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

VNR GOLD

ಮಾಣಿಲ ಕ್ಷೇತ್ರವು ಕೇವಲ ಪೂಜೆ-ಪುನಸ್ಕಾರಗಳಿಗೆ ಸೀಮಿತವಾಗದೆ, ಸಮಾಜದಲ್ಲಿ ಸಾತ್ವಿಕತೆ, ಶಾಂತಿ ಮತ್ತು ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ಹಲವು ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ. ಬಂಟ್ವಾಳ ತಾಲೂಕಿನ ಭಕ್ತರು ವಿಶೇಷವಾಗಿ ದವಸ-ಧಾನ್ಯಗಳನ್ನು ಸಮರ್ಪಿಸುವ ಮೂಲಕ ಅನ್ನದಾನ ಮತ್ತು ಬಾಲಭೋಜನ ಕಾರ್ಯಕ್ರಮಗಳಿಗೆ ಕೈಜೋಡಿಸುವಂತೆ ಅವರು  ಹೇಳಿದರು.

ಜಾಹೀರಾತು

ಟ್ರಸ್ಟಿಗಳಾದ ದೇವಪ್ಪ ಕುಲಾಲ್, ತಾರಾನಾಥ ಕೊಟ್ಟಾರಿ, ಮಚ್ಚೇಂದ್ರ ಸಾಲಿಯಾನ್, ಪ್ರಮುಖರಾದ ಕೈಯೂರು ನಾರಾಯಣ ಭಟ್, ಪ್ರಭಾಕರ ಪ್ರಭು, ಸುಭಾಶ್ಚಂದ್ರ ಜೈನ್, ದಿನೇಶ್ ಶೆಟ್ಟಿ ದಂಬೆದಾರ್, ಸೀತಾರಾಮ ಶೆಟ್ಟಿ ಕಾಂತಾಡಿ, ಅಶೋಕ್ ಶೆಟ್ಟಿ ಸರಪಾಡಿ, ಪುರುಷೋತ್ತಮ ಸರಪಾಡಿ, ಸಂಪತ್ ಕುಮಾರ್, ಮೋಹನ್ ಶೆಟ್ಟಿ ವಾಮದಪದವು, ಮೋಹನ್ ಬಿ, ಸಂಜೀವ ಪೂಜಾರಿ ಗುರುಕೃಪ, ರಮೇಶ್ ಪಣೋಲಿಬೈಲು, ಸುದೀಪ್ ಶೆಟ್ಟಿ, ಉಮೇಶ್ ನಾವೂರ, ದಿನೇಶ್ ಶೆಟ್ಟಿ ದಂಡೆಗೋಳಿ, ನವೀನ್ ಚಂದ್ರ ಶೆಟ್ಟಿ ವಾಮದಪದವು,ಸುಮಿತ್ ಕುಮಾರ್, ಸುಕುಮಾರ್ ಬಂಟ್ವಾಳ, ರಮೇಶ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಪದಾಧಿಕಾರಿಗಳು,ವಿವಿಧ ದೇವಸ್ಥಾನಗಳ ಆಡಳಿತ ಮೊಕ್ತೇಸರುಗಳು, ಭಕ್ತರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ಕಲಾವಿದ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts