ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿ.ಎಲ್.ಎ ಗಳಿಗೆ ಅಗತ್ಯ ಮಾಹಿತಿ ಹಾಗೂ ದಾಖಲಾತಿಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರವನ್ನು ಮಾಜಿ ಸಚಿವರಾದ ಬಿ. ರಮಾನಾಥ ರೈ ಉದ್ಘಾಟಿಸಿದರು.
ಎಸ್.ಐ.ಆರ್. ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ಮತದಾರರಿಗೆ ಸೂಕ್ತ ಮಾಹಿತಿ ಹಾಗೂ ಅಗತ್ಯ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಈ ಮಾಹಿತಿ ಸೇವಾ ಕೇಂದ್ರವನ್ನು ಆರಂಭಿಸಲಾಗಿದೆ. ಬಿ.ಎಲ್.ಎ.ಗಳು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಗ್ರಾಮದ ಮುಖಂಡರು ಸಮನ್ವಯದಿಂದ ಕಾರ್ಯನಿರ್ವಹಿಸಿ ಪ್ರತಿಯೊಬ್ಬ ಅರ್ಹ ಮತದಾರರಿಗೂ ಅಗತ್ಯ ನೆರವು ದೊರಕುವಂತೆ ನೋಡಿಕೊಳ್ಳಬೇಕು ಎಂದರು.
ಈ ಮಾಹಿತಿ ಸೇವಾ ಕೇಂದ್ರದಲ್ಲಿ ಎಸ್.ಐ.ಆರ್. ಅರ್ಜಿ ಭರ್ತಿ, ಅಗತ್ಯ ದಾಖಲೆಗಳ ಕುರಿತು ಮಾಹಿತಿ, ಮತದಾರರ ಪಟ್ಟಿಗೆ ಸಂಬಂಧಿಸಿದ ಮಾರ್ಗದರ್ಶನ ಸೇರಿದಂತೆ ವಿವಿಧ ಸೇವೆಗಳು ಲಭ್ಯವಿರಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಅವರು ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಆರ್ ಅಂಚನ್ ಮತ್ತು ಚಂದ್ರಶೇಖರ್ ಭಂಡಾರಿ, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಜಯಂತಿ ಪೂಜಾರಿ, ಐಡಾ ಸುರೇಶ್, ಪದ್ಮಶೇಖರ್ ಜೈನ್, ಎಂ ಎಸ್ ಮೊಹಮ್ಮದ್, ಸಂಜೀವ ಪೂಜಾರಿ, ಅಬ್ಬಾಸ್ ಅಲಿ, ಪದ್ಮನಾಭ ರೈ,ಸುಭಾಷ್ ಕೊಲ್ನಾಡು ಮತ್ತು ಬಿ.ಎಲ್.ಎ.ಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು
(more…)