ಅಡಿಕೆ ಬೆಳೆಯಲ್ಲಿ ಸಮಸ್ಯೆ, ಪೋಷಕಾಂಶ ನಿರ್ವಹಣೆ ಕುರಿತು ರೈತರಿಗೆ ಹೊರಾಂಗಣ ತರಬೇತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಬಂಟ್ವಾಳ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಆಶ್ರಯದಲ್ಲಿ 2026–27ನೇ ಸಾಲಿನ ಪಿಎಂ-ಆರ್‌ಕೆವಿವೈ  ಯೋಜನೆಯಡಿ ರೈತರಿಗೆ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಮಂಗಳವಾರ ಗೋಳ್ತಮಜಲು ಗ್ರಾಮದ ಅಮ್ಟೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು

VNR GOLD

ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷ ರಮೇಶ್ ಶೆಟ್ಟಿಗಾರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮೋಹನರಾಜ್ ಚೌಟ ನೆರವೇರಿಸಿದರು. ಮಂಗಳೂರು ಉಪಕೃಷಿ ನಿರ್ದೇಶಕ ಡಾ. ಅಶೋಕ್ ಪ್ರಾಸ್ತಾವಿಕ ಮಾತನಾಡಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೇಂದ್ರಿಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರ, ವಿಟ್ಲದ ವಿಜ್ಞಾನಿ ಡಾ. ನಾಗರಾಜ್ ಅವರು ಅಡಿಕೆ ಬೆಳೆಯಲ್ಲಿ ಸಮಗ್ರ ಪೀಡೆ ಹಾಗೂ ಪೋಷಕಾಂಶ ನಿರ್ವಹಣೆ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡಿದರು.

ಜಾಹೀರಾತು

ಗೋಳ್ತಮಜಲು ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಂಟ್ವಾಳ ತಾಲೂಕಿನ ತಾಂತ್ರಿಕ ಕೃಷಿ ಅಧಿಕಾರಿ ನಂದನ್  ಶೆಣೈ ಅವರು ಕೃಷಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಪಾಣೆಮಂಗಳೂರು ವಲಯದ ಆತ್ಮ ಯೋಜನೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಹನುಮಂತ ಕಾಲಗಿ ಅವರು 2026–27ನೇ ಸಾಲಿನ ರೈತರ ಬೆಳೆ ಸಮೀಕ್ಷೆ ಕುರಿತು ಮಾಹಿತಿ ನೀಡಿದರು.

ಗೋಳ್ತಮಜಲು ಆಶೀರ್ವಾದ ಸಂಜೀವಿನಿ ಒಕ್ಕೂಟ ದ ಅದ್ಯಕ್ಷೆ ವಿದ್ಯಾ ಕೊಟ್ಟಾರಿ ಹಾಗೂ ಸಂಜೀವಿನಿ ಅಭಿಯಾನದ  ಘಟಕದ ವಲಯ ಮೇಲ್ವಿಚಾರಕರಾದ ಕುಸುಮ ಉಪಸ್ಥಿತರಿದ್ದರು.

ವಿಜಯ ಪ್ರಕಾಶ್ ಅವರು ಪ್ರಾರ್ಥನೆ ನೆರವೇರಿಸಿದರು. ಬಂಟ್ವಾಳ ತಾಲೂಕ್ ಪಂಚಾಯತಿ ಮಾಜಿ ಉಪಾಧ್ಯಕ್ಷರು ದಿನೇಶ್ ಅಮ್ಟೂರು ಸ್ವಾಗತಿಸಿದರು. ಕೃಷಿ ಸಖಿ ಪುಷ್ಪಾವತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಪುಸ್ತಕ ಬರಹಗಾರ ಭವಾನಿ ಧನ್ಯವಾದಗೈದರು.

ಕಾರ್ಯಕ್ರಮದಲ್ಲಿ ಸುಮಾರು 140 ಮಂದಿ ಕೃಷಿಕರು ಭಾಗವಹಿಸಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ, ಕೃಷಿ ಇಲಾಖೆಯ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ, ರೈತರು ಇ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸಿಬ್ಬಂದಿ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಡಿಕೆ ಬೆಳೆಯಲ್ಲಿ ಸಮಸ್ಯೆ, ಪೋಷಕಾಂಶ ನಿರ್ವಹಣೆ ಕುರಿತು ರೈತರಿಗೆ ಹೊರಾಂಗಣ ತರಬೇತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*