ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಬಂಟ್ವಾಳ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಆಶ್ರಯದಲ್ಲಿ 2026–27ನೇ ಸಾಲಿನ ಪಿಎಂ-ಆರ್‌ಕೆವಿವೈ ಯೋಜನೆಯಡಿ ರೈತರಿಗೆ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಮಂಗಳವಾರ ಗೋಳ್ತಮಜಲು ಗ್ರಾಮದ ಅಮ್ಟೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು
ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷ ರಮೇಶ್ ಶೆಟ್ಟಿಗಾರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮೋಹನರಾಜ್ ಚೌಟ ನೆರವೇರಿಸಿದರು. ಮಂಗಳೂರು ಉಪಕೃಷಿ ನಿರ್ದೇಶಕ ಡಾ. ಅಶೋಕ್ ಪ್ರಾಸ್ತಾವಿಕ ಮಾತನಾಡಿದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೇಂದ್ರಿಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರ, ವಿಟ್ಲದ ವಿಜ್ಞಾನಿ ಡಾ. ನಾಗರಾಜ್ ಅವರು ಅಡಿಕೆ ಬೆಳೆಯಲ್ಲಿ ಸಮಗ್ರ ಪೀಡೆ ಹಾಗೂ ಪೋಷಕಾಂಶ ನಿರ್ವಹಣೆ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡಿದರು.
ಗೋಳ್ತಮಜಲು ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಂಟ್ವಾಳ ತಾಲೂಕಿನ ತಾಂತ್ರಿಕ ಕೃಷಿ ಅಧಿಕಾರಿ ನಂದನ್ ಶೆಣೈ ಅವರು ಕೃಷಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಪಾಣೆಮಂಗಳೂರು ವಲಯದ ಆತ್ಮ ಯೋಜನೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಹನುಮಂತ ಕಾಲಗಿ ಅವರು 2026–27ನೇ ಸಾಲಿನ ರೈತರ ಬೆಳೆ ಸಮೀಕ್ಷೆ ಕುರಿತು ಮಾಹಿತಿ ನೀಡಿದರು.
ಗೋಳ್ತಮಜಲು ಆಶೀರ್ವಾದ ಸಂಜೀವಿನಿ ಒಕ್ಕೂಟ ದ ಅದ್ಯಕ್ಷೆ ವಿದ್ಯಾ ಕೊಟ್ಟಾರಿ ಹಾಗೂ ಸಂಜೀವಿನಿ ಅಭಿಯಾನದ ಘಟಕದ ವಲಯ ಮೇಲ್ವಿಚಾರಕರಾದ ಕುಸುಮ ಉಪಸ್ಥಿತರಿದ್ದರು.
ವಿಜಯ ಪ್ರಕಾಶ್ ಅವರು ಪ್ರಾರ್ಥನೆ ನೆರವೇರಿಸಿದರು. ಬಂಟ್ವಾಳ ತಾಲೂಕ್ ಪಂಚಾಯತಿ ಮಾಜಿ ಉಪಾಧ್ಯಕ್ಷರು ದಿನೇಶ್ ಅಮ್ಟೂರು ಸ್ವಾಗತಿಸಿದರು. ಕೃಷಿ ಸಖಿ ಪುಷ್ಪಾವತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಪುಸ್ತಕ ಬರಹಗಾರ ಭವಾನಿ ಧನ್ಯವಾದಗೈದರು.
ಕಾರ್ಯಕ್ರಮದಲ್ಲಿ ಸುಮಾರು 140 ಮಂದಿ ಕೃಷಿಕರು ಭಾಗವಹಿಸಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ, ಕೃಷಿ ಇಲಾಖೆಯ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ, ರೈತರು ಇ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸಿಬ್ಬಂದಿ ಉಪಸ್ಥಿತರಿದ್ದರು.