ಜುಲೈ 8ರಂದು ಅಂಗನವಾಡಿಯಿಂದ ಪಿಯುವರೆಗೆ ರಜೆ

VNR GOLD

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಕಟಣೆಯನ್ನು ಹೊರಡಿಸಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್- ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ಜಾಹೀರಾತು
  1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ, ದಿನಾಂಕ: 08.07.2026 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.
  2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
  3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
  4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
  5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
  6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

ಜಾಹೀರಾತು

Be the first to comment on "ಜುಲೈ 8ರಂದು ಅಂಗನವಾಡಿಯಿಂದ ಪಿಯುವರೆಗೆ ರಜೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*