ಬಂಟ್ವಾಳ

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ವಿದ್ಯಾರ್ಥಿ ಸಂಘ ಉದ್ಘಾಟನೆ

ಸಮರ್ಥ ನಾಯಕರು ದೇಶ ನಡೆಸಬಲ್ಲರು. ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ದೇಶವನ್ನು ಮುನ್ನಡೆಸಲು ಇದು ಭದ್ರ ಬುನಾದಿ. ಯುವಕರು ದಾರಿ ತಪ್ಪಬಾರದು. ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು. ಜವಾಬ್ದಾರಿಯುತ ನಾಗರಿಕನಾಗಬೇಕು ಎಂದು ದ.ಕ.ಜಿಲ್ಲೆ ಎ.ಎಸ್.ಪಿ. ಅನಿಲ್ ಕುಮಾರ್ ಬೂಮಾ‌ ರೆಡ್ಡಿ ಹೇಳಿದರು.

ಅವರು ಮಂಗಳವಾರ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಬೋಧಶ್ರೀ ಸಭಾಭವನದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ, ಮಾತನಾಡಿದರು.

ಮಂಗಳೂರು ಎ.ಬಿ.ಡೆಂಟಲ್ ಕಾಲೇಜು ನಿವೃತ್ತ ಡೀನ್ ಮತ್ತು ಪ್ರಾಂಶುಪಾಲ ಡಾ.ಬಿ.ರಾಜೇಂದ್ರಪ್ರಸಾದ್ ಅಧ್ಯಕ್ಷತೆ ವಹಿಸಿ, ಮಾತನಾಡಿ, ಉತ್ತಮ ಅಂಶಗಳನ್ನು ಅಳವಡಿಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಬೇಕು. ಜವಾಬ್ದಾರಿ ಹೊತ್ತವರು ಮಾತ್ರ ನಾಯಕತ್ವ ಬೆಳೆಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಜಾಹೀರಾತು

ಬಜಪೆ ಪಾಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಗೋಪಿನಾಥ ಹೆಗ್ಡೆ ಮಾತನಾಡಿ, ಹೆತ್ತವರು ಮತ್ತು ಶಿಕ್ಷಕರ ಜೊತೆ ವಿದ್ಯಾರ್ಥಿಗಳು ಸತ್ಯವನ್ನು ಹೇಳಬೇಕು. ವಿಶ್ವಾಸ ಗಳಿಸಬೇಕು. ಶಿಸ್ತು, ಸಂಯಮ ಹೊಂದಿರಬೇಕು ಎಂದು ಹೇಳಿದರು.

VNR GOLD

ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಸಿ.ಪಿ.ಎಲ್. ಹೃತಿಕ್ ರವಿ ಕುಮಾರ್, ಎಸ್.ಪಿ.ಎಲ್.ತನ್ವಿಷ್ ಉಪಸ್ಥಿತರಿದ್ದರು.

ಪ್ರಾಂಶುಪಾಲ ಸಂದೀಪ್ ಆಚಾರ್ಯ ಪ್ರಮಾಣವಚನ ಬೋಧಿಸಿದರು.ವಿದ್ಯಾರ್ಥಿನಿ ಡಿಂಪಲ್ ಸ್ವಾಗತಿಸಿದರು. ಪ್ರಥ್ವಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸುಪೇಕ್ಷಾ ವಂದಿಸಿದರು. ಬಳಿಕ‌ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.