ಬಂಟ್ವಾಳ

ಬ್ರಹ್ಮರಕೂಟ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಉಚಿತ ಕರಾಟೆ ತರಬೇತಿಗೆ ಚಾಲನೆ

ವಿದ್ಯಾರ್ಥಿಗಳಲ್ಲಿ ಆತ್ಮರಕ್ಷಣೆ ಕೌಶಲ್ಯ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮರಕೂಟ್ಲುವಿನಲ್ಲಿ ಉಚಿತ ಕರಾಟೆ ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಮಾರ್ಷಲ್ ಆರ್ಟ್ ಕರಾಟೆ ತರಬೇತುದಾರ ರಾಜೇಶ್ ಮಂಜೇಶ್ವರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಕರಾಟೆ ತರಬೇತಿ ನೀಡುವುದು ತಮ್ಮ ಉದ್ದೇಶವಾಗಿದೆ. ಕರಾಟೆ ಕೇವಲ ಆತ್ಮರಕ್ಷಣೆಯ ಕಲೆಯಲ್ಲ, ಅದು ಶಿಸ್ತು, ಆತ್ಮವಿಶ್ವಾಸ, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಅತ್ಯುತ್ತಮ ಕಲೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಉದಯಕುಮಾರ್ ಜ್ಯೋತಿಗುಡ್ಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಲಾವಿದ ಹರೀಶ್ ಆಚಾರ್ಯ ಹಾಗೂ ವರದಿಗಾರ ಯಾದವ ಅಗ್ರಬೈಲು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕಿ, ಶಿಕ್ಷಕ ವೃಂದ, ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

VNR GOLD
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.