ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಕಾಲೇಜು,ಮಂಗಳೂರು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಸಹಯೋಗದಲ್ಲಿ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಕಿಲ್ ಕ್ಲಬ್ ಅನ್ನು ಉದ್ಘಾಟಿಸಲಾಯಿತು.
ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಕಾಲೇಜಿನ ಅಧ್ಯಕ್ಷ ಡಾ. ರಾಘವೇಂದ್ರ ಹೊಳ್ಳ ಎನ್ ದೀಪ ಬೆಳಗುವ ಮೂಲಕ ಸ್ಕಿಲ್ ಕ್ಲಬ್ ಉದ್ಘಾಟಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಾಯಕತ್ವ ಗುಣ, ಪರಿಣಾಮಕಾರಿ ಸಂವಹನ ,ಸಂಶೋಧನಾ ಪ್ರವೃತ್ತಿ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಂತಾಗಲಿ ಎಂದು ಹಾರೈಸಿದರು ಬಳಿಕ ಪರಿಣಾಮಕಾರಿ ನಾಯಕತ್ವ ತರಬೇತಿಯನ್ನು ನೀಡಿದರು.
ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಕವಿತ ವಿದ್ಯಾರ್ಥಿಗಳು ಹೊಸಕಾಲದ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯ ಇರುವ ಉತ್ತಮ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು.
ಗಣಿತ ಶಾಸ್ತ್ರ ಉಪನ್ಯಾಸಕರಾದ ರವಿಚಂದ್ರ ಮಯ್ಯ ಸ್ವಾಗತಿಸಿದರು. ಸ್ಕಿಲ್ ಕ್ಲಬ್ ಸಂಯೋಜಕರಾದ ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಚಂದ್ರಶೇಖರ್ ವಂದಿಸಿದರು.ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್ ಕಾರ್ಯಕ್ರಮ ನಿರೂಪಿಸಿದರು.