ಬಂಟ್ವಾಳ

ಬಾಳ್ತಿಲ ಗ್ರಾಪಂ: ಅಭಿವೃದ್ಧಿಗೊಂಡ ಕಾಂದಿಲ ಬರಿಮಾರ್ ರಸ್ತೆ ಲೋಕಾರ್ಪಣೆ

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಕೊಡುಗೆಯಾಗಿ ಬಾಳ್ತಿಲ ಗ್ರಾಮದ ಕಾಂದಿಲ–ಬರಿಮಾರ್ ರಸ್ತೆಯನ್ನು 30 ಲಕ್ಷ ರೂ ಅನುದಾನದಲ್ಲಿ ಅಭಿವೃದ್ಧಿಗೊಂಡು ಲೋಕಾರ್ಪಣೆಗೊಂಡಿತು.

 ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಭೂತ ಸೌಕರ್ಯಗಳನ್ನು ತಲುಪಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಗ್ರಾಮೀಣ ರಸ್ತೆ ಅಭಿವೃದ್ಧಿಯಿಂದ ಜನರ ದೈನಂದಿನ ಜೀವನ ಮತ್ತಷ್ಟು ಸುಗಮವಾಗಲಿದೆ ಎಂದು ಹೇಳಿದರು. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ರುಕ್ಮಯ ಪೂಜಾರಿ, ಬಂಟ್ವಾಳ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಆರೋಗ್ಯ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ. ಜನರ ಅಗತ್ಯಗಳನ್ನು ಅರ್ಥಮಾಡಿಕೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿರುವ ಶಾಸಕ ರಾಜೇಶ್ ನಾಯ್ಕ್ ಅವರ ಕಾರ್ಯವೈಖರಿ ಶ್ಲಾಘನೀಯವಾಗಿದ್ದು, ಗ್ರಾಮೀಣ ಭಾಗಗಳಿಗೆ ಇಂತಹ ಅಭಿವೃದ್ಧಿ ಯೋಜನೆಗಳು ಇನ್ನಷ್ಟು ವೇಗ ಪಡೆಯಲಿ ಎಂದು ಆಶಿಸಿದರು.

ಜಾಹೀರಾತು
VNR GOLD

ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್ ಮಾತನಾಡಿ, ಬಿಜೆಪಿ ಜನಪ್ರತಿನಿಧಿಗಳ ಅಭಿವೃದ್ಧಿಪರ ಚಿಂತನೆಯ ಫಲವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಕಾಮಗಾರಿಗಳು ವೇಗವಾಗಿ ಅನುಷ್ಠಾನಗೊಳ್ಳುತ್ತಿವೆ. ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಹಕಾರದಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಪಯಣ ಮತ್ತಷ್ಟು ಬಲಗೊಳ್ಳಲಿದೆ ಎಂದು ಹೇಳಿದರು.

ಕಾಂದಿಲ–ಬರಿಮಾರ್ ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ನಿವಾಸಿಗಳು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರದ ಸೌಲಭ್ಯ ದೊರೆಯಲಿದ್ದು, ಈ ಕಾಮಗಾರಿಯಿಂದ ಗ್ರಾಮೀಣ ಪ್ರದೇಶದ ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಸ್ಥಳೀಯ ಮುಖಂಡರು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಮೋಹನ ಪಿ.ಎಸ್, ಶಿವರಾಜ ಬಾಳ್ತಿಲ, ಅಶೋಕ್ ನೀರಪಾದೆ, ವಿಠ್ಠಲ್ ನಾಯ್ಕ್, ಹಿರಾನ್ಮಯಿ, ಮಲ್ಲಿಕಾ, ಚಂದ್ರಶೇಖರ ಚೆಂಡೆ, ಶರತ್ ನೀರಪಾದೆ, , ಜಿನರಾಜ್ ಕೋಟ್ಯಾನ್, ಹರೀಶ್ ಶೆಟ್ಟಿ ಕಾಂದಿಲ, ಕೃಷ್ಣಪ್ಪ ಪೂಜಾರಿ, ಕುಮಾರ್ ಕಾಂದಿಲ, ತಾರಾನಾಥ ಶೇಣೆರೆಕೋಡಿ, ಲೋಕಾನಂದ, ಕೇಶವ ಏಳ್ತಿಮಾರ್, ಸುರೇಶ್ ಶೆಟ್ಟಿ ಕಾಂದಿಲ, ಉತ್ತಮ್, ಸೇಸಪ್ಪ ನಾಯ್ಕ, ಮಮತ ಕಶೆಕೋಡಿ, ಲತೀಶ್ ಕುರ್ಮಾನ್ ಸೇರಿದಂತೆ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.