ಪ್ರಮುಖ ಸುದ್ದಿಗಳು

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಆಧುನಿಕ ಮಾಧ್ಯಮ ಕ್ಷೇತ್ರದಲ್ಲಿ ಎ.ಐ. ತಂತ್ರಜ್ಞಾನ ಎಂಬ ವಿಷಯದಲ್ಲಿ ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಜಯ್ ಶಾಸ್ತ್ರಿ ಸಿ.ಜಿ. ಉಪನ್ಯಾಸ ನೀಡಲಿದ್ದಾರೆ. ಪತ್ರಿಕಾ ವಿತರಕ ಇಬ್ರಾಹಿಂ ನೆಕ್ಕಿಲಾಡಿ ಅವರನ್ನು ಪತ್ರಿಕಾ ದಿನಾಚರಣೆ ಪ್ರಯುಕ್ತ ಸನ್ಮಾನಿಸಿ ಗೌರವಿಸಲಾಗುತ್ತದೆ. ತಾಲೂಕು ಪತ್ರಕರ್ತರ ಸಂಘದಲ್ಲಿರುವ ವಿಶೇಷ ಸಾಧಕ ಪತ್ರಕರ್ತರು ಹಾಗೂ ಶೈಕ್ಷಣಿಕ ಸಾಧನೆ ಮಾಡಿದ, ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುತ್ತದೆ.

ಜಾಹೀರಾತು
VNR GOLD

ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಕಾರ್ಯದರ್ಶಿ ಸಿದ್ಧಿಕ್ ನೀರಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬಿ.ಟಿ.ರಂಜನ್ ಪ್ರಶಸ್ತಿ:

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರು ಪತ್ರಿಕಾ ರಂಗಕ್ಕೆ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಅವರ ಸ್ಮರಣಾರ್ಥ ಉತ್ತಮ ಪತ್ರಿಕಾ ವರದಿಗೆ ಪುತ್ತೂರು ಉಪ ವಿಭಾಗದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ವಾರ್ಷಿಕ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಪ್ರಥಮ ವರ್ಷದ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯಲ್ಲಿ ಸುದ್ದಿ ಬಿಡುಗಡೆ ಮತ್ತು ಉದಯವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ ಅರವಿಂದ ಹೆಬ್ಬಾರ್ ಅವರು ಕಳೆದ 7  ವರ್ಷಗಳಿಂದ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.