ಬಂಟ್ವಾಳ

17ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಉದ್ಘಾಟನೆ  | ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜುಲೈ 17ರಂದು ಅಮೃತ ಭಾರತ ಯೋಜನೆಯಡಿ 26.18 ಕೋಟಿ ರೂ ವೆಚ್ಚದಲ್ಲಿ ಮರುನಿರ್ಮಾಣಗೊಂಡ ನವೀಕೃತ ಬಂಟ್ವಾಳ ರೈಲ್ವೆ ನಿಲ್ದಾಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

VNR GOLD

ಮಧ್ಯಾಹ್ನ 3.40ಕ್ಕೆ ಕಾರ್ಯಕ್ರಮ ನಡೆಯಲಿರುವುದು. ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ವಿಡಿಯೋ ಕಾನ್ಫರೆನ್ಸ್ ವೀಕ್ಷಿಸಲು ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಹಿತ ಪ್ರಮುಖರು ಉಪಸ್ಥಿತರಿರುವರು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಅಮೃತ ಭಾರತ ಸ್ಟೇಶನ್ ಸ್ಕೀಮ್ ನ (ಎಪಿಎಸ್ ಎಸ್ ) ಎರಡನೇ ಹಂತದಲ್ಲಿ ನವೀಕರಣಗೊಂಡ ನೈಋತ್ಯ ರೈಲ್ವೆ ವಲಯದ ನಾಲ್ಕು ರೈಲ್ವೆ ನಿಲ್ದಾಣಗಳು ಅಭಿವೃದ್ಧಿಗೊಂಡರೆ, ದೇಶದಾದ್ಯಂತ ಒಟ್ಟು 75 ರೈಲು ನಿಲ್ದಾಣಗಳು ಅಭಿವೃದ್ಧಿಗೊಂಡಿವೆ. ಇವೆಲ್ಲವೂ ಜುಲೈ 17ರಂದು ವರ್ಚುವಲ್ ಪ್ರಕ್ರಿಯೆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.