ಬಿ.ಸಿ.ರೋಡ್: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲೇ ಯುವತಿಗೆ ಇರಿತ, ಕೃತ್ಯ ನಡೆಸಿ ಯುವಕ ಪರಾರಿ, ತೀವ್ರ ಗಾಯಗಳೊಂದಿಗೆ ಯುವತಿ ಮೃತ್ಯು

ಬಂಟ್ವಾಳ: ಯುವತಿಯೊಬ್ಬಳನ್ನು ಮಾರಕಾಯುಧದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಗುರುವಾರ ಸಂಜೆ ಬಿ.ಸಿ.ರೋಡ್ ನಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದಿದೆ.

ಯುವತಿಯೊಬ್ಬಳನ್ನು ಮಾರಕಾಯುಧದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಗುರುವಾರ ಸಂಜೆ ಬಿ.ಸಿ.ರೋಡ್ ನಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ಯುವತಿ ಬಂಟ್ವಾಳ ಉಳಿಗ್ರಾಮ ನಿವಾಸಿ ಲಾವಣ್ಯ (21) ಹಾಗೂ ಆರೋಪಿತ ಬೆಳ್ತಂಗಡಿ ಒಡಿಲ್ನಾಳ ನಿವಾಸಿ ಚೇತನ್

VNR GOLD

ಗಂಭೀರವಾಗಿ ಗಾಯಗೊಂಡಿದ್ದ ಯುವತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂದು ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಭೇಟಿ ನೀಡಿದ್ದಾರೆ.

ಜಾಹೀರಾತು

ಈತನ ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆಹಚ್ಚುವುದಾಗಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

CRIME NEWS from BCROAD

ಈ ಕೃತ್ಯ ಎಸಗಿದ ಆರೋಪಿಯನ್ನು ಪತ್ತೆಹಚ್ಚಲು ಮತ್ತು ವೆರಿಫೈ ಮಾಡಲು ಈಗಾಗಲೇ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ವಿಡಿಯೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪುರಿ ಜಗನ್ನಾಥ ರಥೋತ್ಸವದಲ್ಲಿರುವ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಘಟನೆಯ ಕುರಿತು ವಿವರಗಳನ್ನು ಹಿರಿಯ ಪೊಲೀಸ್ ಅಧಿಕಾರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಯಾವುದೇ ವಿಳಂಬವಿಲ್ಲದೆ ಬಂಧಿಸಿ, ಅನ್ವಯವಾಗುವ ಎಲ್ಲಾ ಕಾನೂನುಗಳಡಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದೇ ರೀತಿಯ ದುರ್ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ನಿಗಾವನ್ನು ಮತ್ತಷ್ಟು ಬಲಪಡಿಸಬೇಕು. ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಸಿಸಿಟಿವಿ ನಿಗಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಹಾಗೂ ಮಹಿಳೆಯರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾಹೀರಾತು

Be the first to comment on "ಬಿ.ಸಿ.ರೋಡ್: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲೇ ಯುವತಿಗೆ ಇರಿತ, ಕೃತ್ಯ ನಡೆಸಿ ಯುವಕ ಪರಾರಿ, ತೀವ್ರ ಗಾಯಗಳೊಂದಿಗೆ ಯುವತಿ ಮೃತ್ಯು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*