ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆ ಪ್ರಕರಣವನ್ನು ಹಿಂದು ಜಾಗರಣಾ ವೇದಿಕೆ ಖಂಡಿಸಿದೆ.
ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಆರೋಪಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಮೃತ ಯುವತಿಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ವೇದಿಕೆ ಆಗ್ರಹಿಸಿದೆ.ಸಮಾಜದಲ್ಲಿ ಇಂಥ ಅಮಾನುಷ, ಕ್ರೂರ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ, ಇದು ಸಾರ್ವಜನಿಕರಲ್ಲಿ ಆತಂಕಕ್ಕೀಡುಮಾಡಿದೆ ಎಂದು ವೇದಿಕೆ ಹೇಳಿದೆ