ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.18ರಂದು ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ.
ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.