ಬಂಟ್ವಾಳ

ಬಂಟ್ವಾಳದಲ್ಲಿ ನಡೆದ ಯುವತಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು : ಎಸ್‌ಡಿಪಿಐ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ನಡೆದ ಅಮಾನುಷ ಹಲ್ಲೆ ಹಾಗೂ ಹತ್ಯೆ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಎಂದು ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿಯಾದ ಅಕ್ಬರ್ ಅಲಿ ಪೊನ್ನೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಮೃತ ಲಾವಣ್ಯ ಅವರ ಕುಟುಂಬಕ್ಕೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುರ್ಘಟನೆಯಿಂದ ಕುಟುಂಬಕ್ಕೆ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದೇ ತಿಂಗಳಲ್ಲಿ ಮಂಚಿ-ಕುಕ್ಕಾಜೆ ಸಮೀಪದ ಮೊಂತಿಮಾರ್‌ನಲ್ಲಿ ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಯುವತಿಯ ಮೇಲೆ ನಡೆದ ಚಾಕು ದಾಳಿ ಹಾಗೂ ಅದರ ಬೆನ್ನಲ್ಲೇ ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಹತ್ಯೆ ಘಟನೆಗಳು ಅತ್ಯಂತ ಖಂಡನೀಯ ಮತ್ತು ಆತಂಕಕಾರಿ ಬೆಳವಣಿಗೆಗಳಾಗಿವೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಯುವತಿಯರು ಸುರಕ್ಷಿತವಾಗಿ ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಪೊಲೀಸ್ ಇಲಾಖೆ ಈ ಪ್ರಕರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಆರೋಪಿಗಳನ್ನು ಬಂಧಿಸಿ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಬಸ್ ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವುದು ಅಗತ್ಯವಾಗಿದೆ. ಮಹಿಳೆಯರ ಸುರಕ್ಷತೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ; ಅದು ಸಮಾಜ ಮತ್ತು ಆಡಳಿತದ ಸಮಗ್ರ ಹೊಣೆಗಾರಿಕೆಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

VNR GOLD
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.