ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಶುಕ್ರವಾರ ಸಂಜೆ ಬಂಟ್ವಾಳದ ತಾಲೂಕು ಸರಕಾರಿ ಆಸ್ಪತ್ರೆಗೆ ಧಿಢೀರ್ ಭೇಟಿ ನೀಡಿ, ಆರೋಗ್ಯ ಇಲಾಖೆಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.’

ಆಸ್ಪತ್ರೆಗೆ ಆಗಮಿಸಿದ ರೋಗಿಗಳ ಜತೆಗೆ ಮಾತುಕತೆ ನಡೆಸಿದ ಅವರು ಆಸ್ಪತ್ರೆಯ ಆರೋಗ್ಯ ಅಧಿಕಾರಿಗಳ ಜತೆಗೆ ವರದಿ ಪಡೆದುಕೊಂಡರು. ನಿತ್ಯ ಬರುವ ರೋಗಿಗಳು ಎಷ್ಟು, ಔಷಧಿ ಎಷ್ಟು ಸಂಗ್ರಹವಿದೆ, ಸವಲತ್ತುಗಳು ಏನೆಲ್ಲ ಇದೆ ಇತ್ಯಾದಿ ವಿಷಯಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು. ವೈದ್ಯರ ಹಾಜರಾತಿ ಪುಸ್ತಕ ಪರಿಶೀಲಿಸಿದರು. ಆಸ್ಪತ್ರೆಯ ಕಾರ್ಯ ಚಟುವಟಿಕೆಯನ್ನು ಪರಿಶೀಲಿಸಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಚಿವ ಯು.ಟಿ.ಖಾದರ್ ಅವರು ಬಂಟ್ವಾಳ ತಾಲೂಕು ಆಸ್ಪತ್ರೆಯನ್ನು ಇನ್ನೂ ಜನಸ್ನೇಹಿಯಾಗಿ ಅಭಿವೃದ್ಧಿ ಪಡಿಸಬಹುದು ಎನ್ನುವ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಎಂದರು. ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ಹಾಗೂ ಇತರ ವೈದ್ಯರು, ಸಿಬ್ಬಂದಿ ಹಾಜರಿದ್ದರು.

ಚಂದ್ರಹಾಸ್ ಆರ್.ಕರ್ಕೇರ, ಬೇಬಿ ಕುಂದರ್, ಅಬ್ದುಲ್ ರಝಾಕ್ ಕುಕ್ಕಾಜೆ, ರಶೀದ್ ವಿಟ್ಲ, ರಿಯಾಜ್ ನರಿಕೊಂಬು, ಸುರೇಶ್ ನಾವೂರು, ಫಯಾಜ್ ಮುಡಿಪು, ಫರೀದ್ ಮುಂತಾದವರು ಉಪಸ್ಥಿತರಿದ್ದರು


Be the first to comment on "ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಸಚಿವ ಖಾದರ್ ದಿಢೀರ್ ಭೇಟಿ"