ಬಂಟ್ವಾಳ

ಅಪಘಾತ ಸಂತ್ರಸ್ತರ ಮನೆಗಳಿಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ: ದೇವಸ್ಯಪಡೂರು ಗ್ರಾಮದ ಅತ್ತಳಿಕೆ ಸಮೀಪ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಮೃತಪಟ್ಟ ಪ್ರಮೋದ್ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ದುಃಖದ ಈ ಸಂದರ್ಭದಲ್ಲಿ ಮೃತರ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ ಅವರು, ಭಗವಂತನು ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಅಪಘಾತದಲ್ಲಿ ಗಾಯಗೊಂಡಿರುವ ಸುನಿಲ್ ಅವರ ಮನೆಗೂ ಭೇಟಿ ನೀಡಿದ ಶಾಸಕರು, ಅವರ ಆರೋಗ್ಯ ವಿಚಾರಿಸಿ ಕುಟುಂಬದವರಿಗೆ ಧೈರ್ಯ ತುಂಬಿದರು. ಸುನಿಲ್ ಅವರು ಶೀಘ್ರ ಗುಣಮುಖರಾಗಿ ಆರೋಗ್ಯವಂತರಾಗಿ ತಮ್ಮ ದೈನಂದಿನ ಬದುಕಿಗೆ ಮರಳಲಿ ಎಂದು ಹಾರೈಸಿದರು.

VNR GOLD

ಈ ದುರ್ಘಟನೆ ಅತ್ಯಂತ ನೋವುಂಟು ಮಾಡಿದ್ದು, ರಸ್ತೆ ಸುರಕ್ಷತೆ ಕುರಿತು ಹೆಚ್ಚಿನ ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯವಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಜಾಹೀರಾತು

ಈ ಸಂದರ್ಭದಲ್ಲಿ ಬೂಡಾ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಸತೀಶ್ ಶೆಟ್ಟಿ ಮಧ್ವ, ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ಅಜಿತ್ ಕುಮಾರ್ ಶೆಟ್ಟಿ, ಶಶಿಕಾಂತ ಶೆಟ್ಟಿ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
NEWSDESK

www.bantwalnews.comನಲ್ಲಿ ಪ್ರಕಟಗೊಳ್ಳುವ ಜಾಹೀರಾತುಗಳ, ಲೇಖನಗಳ ವಿಚಾರಗಳಿಗೂ ವೆಬ್ ತಾಣಕ್ಕೂ ಸಂಬಂಧವಿಲ್ಲ. ಇದು ಓದುಗರ ಗಮನಕ್ಕೆ. NOTE: : All opinions regarding the advertisments and articles published in bantwalnews and the related topic are those of the author and advertiser, and this has no relation to BantwalNews. Recommendations and suggestions provided here are left for the readers' consideration.