ಲಾವಣ್ಯ ಮನೆಗೆ ಜನಪ್ರತಿನಿಧಿಗಳ ಭೇಟಿ; ಕುಟುಂಬಕ್ಕೆ ಸಾಂತ್ವನ

ಬಂಟ್ವಾಳ ತಾಲೂಕಿನ ಮೈರ ನಿವಾಸಿ, ಹತ್ಯೆಗೀಡಾದ ಯುವತಿ ಲಾವಣ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತಳ ಪೋಷಕರು ಹಾಗೂ ಕುಟುಂಬದವರನ್ನು ಭೇಟಿಯಾಗಿ ಅವರ ದುಃಖದಲ್ಲಿ ಭಾಗಿಯಾದ ಜನಪ್ರತಿನಿಧಿಗಳು, ಲಾವಣ್ಯ ಅವರ ಹತ್ಯೆ ಅತ್ಯಂತ ನೋವು ಮತ್ತು ಆಘಾತಕಾರಿ ಘಟನೆ ಎಂದು ಖಂಡಿಸಿದರು. ಪ್ರಕರಣದ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ ಅವರು, ಕುಟುಂಬಕ್ಕೆ ನ್ಯಾಯ ದೊರಕಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ವೇಳೆ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಜನಪ್ರತಿನಿಧಿಗಳು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೃತ ಲಾವಣ್ಯ ಅವರ ಆತ್ಮಕ್ಕೆ ಶಾಂತಿ ಕೋರಿ, ಶೋಕಸಂತಪ್ತ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು:
“ಘಟನೆಯ ಸಂದರ್ಭದಲ್ಲಿ ನಾನು ಊರಿನಲ್ಲಿರಲಿಲ್ಲ. ಒಡಿಶಾದ ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ಭಾಗಿಯಾಗಿದ್ದೆ. ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿ, ಆರೋಪಿಯನ್ನು ಕೂಡಲೇ ಬಂಧಿಸಿ ಸಮಗ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದೇನೆ. ಈ ಘಟನೆ ನನಗೆ ತೀವ್ರ ದುಃಖ ತಂದಿದೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೃತ ಲಾವಣ್ಯ ಅವರ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದು, ಅವರೊಂದಿಗೆ ಸದಾ ನಾವಿದ್ದೇವೆ ಎಂದು ಭರವಸೆ ನೀಡಿದ್ದೇನೆ”
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು:
“ಅಮಾಯಕ ಯುವತಿಯನ್ನು ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ. ನಾನು ಪ್ರವಾಸದಲ್ಲಿದ್ದ ಕಾರಣ ಘಟನೆಯ ವೇಳೆ ಬರಲು ಸಾಧ್ಯವಾಗಲಿಲ್ಲ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕುಟುಂಬ ಸದಸ್ಯರು ಆಗ್ರಹಿಸಿದ್ದು, ನಾವು ಕೂಡ ಅದೇ ರೀತಿಯ ಕಠಿಣ ಶಿಕ್ಷೆಗೆ ಒತ್ತಾಯಿಸುತ್ತೇವೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು”
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ:
“ಲಾವಣ್ಯ ಅವರ ಹತ್ಯೆ ಘಟನೆ ಅತ್ಯಂತ ನೋವು ಮತ್ತು ಬೇಸರ ತಂದಿದೆ. ಈ ಕೃತ್ಯ ಎಸಗಿದ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಮೃತರ ಕುಟುಂಬದ ದುಃಖದಲ್ಲಿ ನಾವು ಭಾಗಿಯಾಗಿದ್ದು, ಅವರೊಂದಿಗೆ ಸದಾ ನಾವಿದ್ದೇವೆ”

ಜಾಹೀರಾತು

===
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ರಾಮದಾಸ್ ಬಂಟ್ವಾಳ, ಸುರೇಶ್ ಮೈರ,ಚಿದಾನಂದ ಕಕ್ಯ, ವಸಂತ ಉಳಿ, ರಂಜಿತ್ ಮೈರ, ಅಜಿತ್ ಶೆಟ್ಟಿ ಕಾರಿಂಜ, ಸತೀಶ್ ಶೆಟ್ಟಿ ಮದ್ವ,ಯಶವಂತ ಕಜೆಕಾರು, ಶಶಿಕಾಂತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

VNR GOLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಲಾವಣ್ಯ ಮನೆಗೆ ಜನಪ್ರತಿನಿಧಿಗಳ ಭೇಟಿ; ಕುಟುಂಬಕ್ಕೆ ಸಾಂತ್ವನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*