ಕರ್ಣಾಟಕ ಬ್ಯಾಂಕ್ ಸ್ವತಂತ್ರ ಹೆಚ್ಚುವರಿ ನಿರ್ದೇಶಕರಾಗಿ ಹೈಕೋರ್ಟ್‌ ಹಿರಿಯ ನ್ಯಾಯವಾದಿ ಡಾ. ಅರುಣ ಶ್ಯಾಮ್ ನೇಮಕ

ಮಂಗಳೂರು: ಮೂಲತಃ ಬಂಟ್ವಾಳ ತಾಲೂಕಿನವರಾದ ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಮತ್ತು ರಾಜ್ಯದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಡಾ. ಅರುಣಶ್ಯಾಮ್ ಅವರನ್ನು ಕರ್ಣಾಟಕ ಬ್ಯಾಂಕ್  ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರನ್ನಾಗಿ (Non-Executive, Independent Director) ನೇಮಕ ಮಾಡಲಾಗಿದೆ.

ಜುಲೈ 18ರಂದು ನಿರ್ದೇಶಕ ಮಂಡಳಿಯ ಸಭೆಯಲ್ಲಿ ಡಾ. ಎಂ.ಅರುಣ ಶ್ಯಾಮ್ ಅವರನ್ನು ಹೆಚ್ಚುವರಿ ನಿರ್ದೇಶಕರಾಗಿ ಜುಲೈ 18ರಿಂದ ನಾಲ್ಕು ವರ್ಷಗಳ ಅವಧಿಗೆ ನೇಮಿಸಲಾಯಿತು. ಅವರ ನೇಮಕವನ್ನು ಮಂಗಳೂರು ದಕ್ಷಿಣ ಶಾಸಕ ಎಂ.ವೇದವ್ಯಾಸ ಕಾಮತ್ ಸಹಿತ ಪ್ರಮುಖರು ಸ್ವಾಗತಿಸಿದ್ದಾರೆ. ಅವರ ವಿವರಗಳು ಇಲ್ಲಿವೆ.

ಡಾ. ಅರುಣ ಶಾಮ್ ಅವರು 1982 ಮಾರ್ಚ್ 21ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಪಂಜಿಗದ್ದೆಯ ಕೃಷಿ ಕುಟುಂಬದಲ್ಲಿ ಜನಿಸಿದರು.

ಜಾಹೀರಾತು

ಪ್ರಾಥಮಿಕ ಶಿಕ್ಷಣವನ್ನು ವಿಟ್ಲ ಮಾದಕಟ್ಟೆ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಿಕ್ಷಣವನ್ನು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾಡಿದ್ದು, ಬಳಿಕ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ (LLB) ಪಡೆದರು. ಶಿವಮೊಗ್ಗದ ಸಿ.ಬಿ.ಆರ್. ನ್ಯಾಷನಲ್ ಲಾ ಕಾಲೇಜಿನ (ಕುವೆಂಪು ವಿವಿ) ಮೂಲಕ ಎಲ್‌ಎಲ್‌ಎಂ (LLM) ಮುಗಿಸಿ, ಬೆಂಗಳೂರಿನ ಅಲಯನ್ಸ್ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪಿಎಚ್‌ಡಿ(Ph.D.) ಪದವಿ ಪಡೆದಿದ್ದಾರೆ.

VNR GOLD

ವಕೀಲಿವೃತ್ತಿ: 2004ರಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿಸಿಕೊಂಡ ಇವರು, ಶಿವಮೊಗ್ಗದ ಹಿರಿಯ ನ್ಯಾಯವಾದಿ ಎಂ.ಆರ್. ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ವೃತ್ತಿಜೀವನ ಆರಂಭಿಸಿದರು.

 2006 ರಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿ ಕೆ. ಎಂ. ನಟರಾಜ್ ಅವರೊಂದಿಗೆ ಬೆಂಗಳೂರು ಹೈಕೋರ್ಟ್‌ನಲ್ಲಿ ಕೆಲಸ ಆರಂಭಿಸಿದರು. ನಂತರ ಬೆಂಗಳೂರಿನಲ್ಲಿ ತಮ್ಮದೇ ಆದ ಅರುಣ್ ಶ್ಯಾಮ್ ಅಸೋಸಿಯೇಟ್ಸ್ ಕಾನೂನು ಸಂಸ್ಥೆಯನ್ನು ಸ್ಥಾಪಿಸಿದರು. ಸೆಪ್ಟೆಂಬರ್ 2020 ರಲ್ಲಿ ಇವರನ್ನು ಕರ್ನಾಟಕ ಸರ್ಕಾರದ Additional Advocate General(AAG) ಆಗಿ ನೇಮಿಸಲಾಗಿತ್ತು. ಶತಮಾನೋತ್ತರ ಇತಿಹಾಸವಿರುವ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್  ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರನ್ನಾಗಿ (Non-Executive, Independent Director) ನೇಮಕ ಮಾಡಲಾಗಿದೆ. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಶೈಕ್ಷಣಿಕ ಮಂಡಳಿ (Academic Council) ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಲೇಜಿನಲ್ಲಿದ್ದಾಗ ಎಬಿವಿಪಿಯ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಅವರು ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಲ್ಪಟ್ಟಿದ್ದಾರೆ. ಇತ್ತೀಚೆಗೆ ಯಶಸ್ವಿಯಾಗಿ ನಡೆದ ಬಂಟ್ವಾಳ ತಾಲೂಕಿನ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಗಮನ ಸೆಳೆದಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕರ್ಣಾಟಕ ಬ್ಯಾಂಕ್ ಸ್ವತಂತ್ರ ಹೆಚ್ಚುವರಿ ನಿರ್ದೇಶಕರಾಗಿ ಹೈಕೋರ್ಟ್‌ ಹಿರಿಯ ನ್ಯಾಯವಾದಿ ಡಾ. ಅರುಣ ಶ್ಯಾಮ್ ನೇಮಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*