ಬಂಟ್ವಾಳ

ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಸಾವು ಘಟನೆ: ಶಾಸಕ ರಾಜೇಶ್ ನಾಯ್ಕ್ ಸಂತಾಪ, ಗಾಯಾಳುಗಳ ಚಿಕಿತ್ಸೆ ಸೌಲಭ್ಯ ಕುರಿತು ವೈದ್ಯರಿಗೆ ಸೂಚನೆ

ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದಿರುವ ದುರ್ಘಟನೆ ಹಾಗೂ ಮಕ್ಕಳಿಗೆ ಗಾಯಗಳಾಗಿರುವ ಮಾಹಿತಿ ದೊರೆಯುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಆಸ್ಪತ್ರೆಯ ವೈದ್ಯರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಗಾಯಾಳು ಮಕ್ಕಳಿಗೆ ಯಾವುದೇ ವಿಳಂಬವಿಲ್ಲದೆ ತುರ್ತು ಚಿಕಿತ್ಸೆ ಒದಗಿಸುವಂತೆ ಸೂಚಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಅನ್ವಿಗೆ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಿ, ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ತಕ್ಷಣವೇ ಕಲ್ಪಿಸುವಂತೆ ಆಸ್ಪತ್ರೆಯ ವೈದ್ಯರೊಂದಿಗೆ ನೇರವಾಗಿ ಸಮಾಲೋಚನೆ ನಡೆಸಿದರು. ಮಗುವಿನ ಆರೋಗ್ಯ ಸ್ಥಿತಿಯ ಬಗ್ಗೆ ನಿರಂತರ ಮಾಹಿತಿ ಪಡೆದುಕೊಂಡ ಅವರು, ಚಿಕಿತ್ಸೆಯಲ್ಲಿ ಯಾವುದೇ ಲೋಪ ಅಥವಾ ವಿಳಂಬವಾಗದಂತೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

VNR GOLD

ಇದೇ ವೇಳೆ ಉಳಿದ ಗಾಯಾಳು ವಿದ್ಯಾರ್ಥಿನಿಯರ ಚಿಕಿತ್ಸೆಯ ಮೇಲೆಯೂ ನಿಗಾ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಮೃತ ಬಾಲಕಿ ಚಿರಣ್ವಿಯ ಕುಟುಂಬಕ್ಕೆ ಅಗತ್ಯ ನೆರವು ಹಾಗೂ ಸಾಂತ್ವನ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.