ಬಂಟ್ವಾಳ: ಬಂಟ್ವಾಳ ತಾಲೂಕಿನ ಬರಿಮಾರ್ ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಖಾಸಗಿ ಶಾಲಾ ಬಸ್ ಮೇಲೆ ದೊಡ್ಡ ಮರವೊಂದು ಬಿದ್ದ ಪರಿಣಾಮ ಓರ್ವ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡ ದುರ್ಘಟನೆ ನಡೆದಿದೆ. ಈ ದುಃಖದ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತ ಬಾಲಕಿಯ ಕುಟುಂಬಕ್ಕೆ ತಮ್ಮ ಆಳವಾದ ಸಂತಾಪ ಮತ್ತು ಸಾಂತ್ವನವನ್ನು ಸೂಚಿಸಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿರುವ ಅವರು, ಸಂಬಂಧಪಟ್ಟ ಅಧಿಕಾರಿಗಳು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.