ಬಂಟ್ವಾಳ: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲೆಯ ಬಸ್ಸಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಬಾಲಕಿ ದುರ್ಘಟನೆಯಲ್ಲಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುಃಖದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ ಸಾಂತ್ವನವನ್ನು ಸೂಚಿಸಿದ್ದಾರೆ.
ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಭಾಗವಹಿಸಲು ವಿದೇಶ ಪ್ರವಾಸ ಕೈಗೊಂಡಿರುವ ಸಚಿವರು, ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.
ಇದಲ್ಲದೆ, ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಂಪೂರ್ಣ ಚಿಕಿತ್ಸೆ ವ್ಯವಸ್ಥೆಯನ್ನು ಸರಕಾರದ ವತಿಯಿಂದ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬರಿಮಾರು ಕಲ್ಲೆಟ್ಟಿಯಲ್ಲಿ ದುರ್ಘಟನೆ: ಸಚಿವ ಯು.ಟಿ. ಖಾದರ್ ಸಂತಾಪ"
Be the first to comment on "ಬರಿಮಾರು ಕಲ್ಲೆಟ್ಟಿಯಲ್ಲಿ ದುರ್ಘಟನೆ: ಸಚಿವ ಯು.ಟಿ. ಖಾದರ್ ಸಂತಾಪ"