ಎಸ್‌ಐಆರ್ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಶ್ರಮಿಸಿ: ಶಾಸಕ ರಾಜೇಶ್ ನಾಯ್ಕ್

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿ ಕುರಿತು ಸಭೆ ಬಿ.ಸಿ.ರೋಡ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ನಡೆಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಪ್ರಗತಿ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿಗತಿ, ಬಾಕಿ ಉಳಿದಿರುವ ಅರ್ಜಿಗಳ ಮಾಹಿತಿ ಹಾಗೂ ಆನ್‌ಲೈನ್ ಅಪ್‌ಲೋಡ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಮತದಾರರ ಪಟ್ಟಿಯು ಶೇ.100ರಷ್ಟು ನಿಖರ ಹಾಗೂ ಸಮಗ್ರವಾಗಿರುವಂತೆ ಕಾರ್ಯಕರ್ತರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಸೂಚಿಸಿದರು.

VNR GOLD

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ಅತ್ಯಂತ ಮಹತ್ವದ ಕಾರ್ಯವಾಗಿದೆ. ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಕಂಡುಬರದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಜಾಹೀರಾತು
OPTIC WORLD

ಸಭೆಯಲ್ಲಿ ವಿವಿಧ ಗ್ರಾಮಗಳ ಎಸ್‌ಐಆರ್ ಕಾರ್ಯದ ಪ್ರಗತಿಯ ಕುರಿತು ಪ್ರತ್ಯೇಕವಾಗಿ ಪರಿಶೀಲನೆ ನಡೆಸಲಾಯಿತು. ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಮಾರ್ಗದರ್ಶನ ನೀಡಲಾಯಿತು. ಎಸ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಎಲ್ಲ ಹಂತಗಳಲ್ಲಿಯೂ ಸಮನ್ವಯತೆ ಹಾಗೂ ಸಂಘಟಿತ ಕಾರ್ಯಾಚರಣೆಗೆ ಆದ್ಯತೆ ನೀಡುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಬಂಟ್ವಾಳದ ಪ್ರಭಾರಿ ರಾಕೇಶ್ ರೈ ಕಡೆಂಜಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ ಹಾಗೂ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರಮುಖರಾದ ಬಿ. ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ಮಾಧವ ಮಾವೆ, ಸುಲೋಚನಾ ಜಿ.ಕೆ. ಭಟ್ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು, ಬೂತ್ ಮಟ್ಟದ ಜವಾಬ್ದಾರರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಎಸ್‌ಐಆರ್ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಶ್ರಮಿಸಿ: ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*