ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಆಶಾ ಕಾರ್ಯಕರ್ತೆಯರ ಮಜ್ದೂರ್ ಸಂಘ, ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘ ಹಾಗೂ ಬೀಡಿ ಮಜ್ದೂರ್ ಸಂಘ, ಬಂಟ್ವಾಳ ತಾಲೂಕುಗಳ ಸಂಯುಕ್ತ ಆಶ್ರಯದಲ್ಲಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಬಿ.ಸಿ.ರೋಡ್‌ನ ಶಿಶು ಮಂದಿರದಲ್ಲಿ ಆಚರಿಸಲಾಯಿತು.

ಮುಖ್ಯ ಭಾಷಣಕಾರರಾಗಿ ಅಗಮಿಸಿದ ಬಿಎಂಎಸ್ ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ ಮಾತನಾಡಿ, ಸಂಘಟನೆಯ ಉಗಮ, ಕಾರ್ಮಿಕ ಚಳವಳಿಯಲ್ಲಿ ಅದರ ಪಾತ್ರ, ಸಾಧನೆಗಳು ಹಾಗೂ ಮುಂದಿನ ದಿನಗಳಲ್ಲಿ ಹೊಸ ಕ್ಷೇತ್ರಗಳಲ್ಲಿ ಸಂಘಟನೆಯನ್ನು ಬಲಪಡಿಸುವ ಅಗತ್ಯ ವಿವರಿಸಿದರು.

ಮುಖ್ಯ ಅತಿಥಿ ದ.ಕ ಜಿಲ್ಲಾ ಸಂಸ್ಕಾರ ಭಾರತಿ ಜಿಲ್ಲಾಧ್ಯಕ್ಷ ತಾರಾನಾಥ್ ಕೊಟ್ಟಾರಿ ಮಾತನಾಡಿ, ಭಾರತೀಯ ಮಜ್ದೂರ್ ಸಂಘದ ಕಾರ್ಯಕರ್ತರು ಸಂಸ್ಕಾರಯುತ ಹಾಗೂ ಮೌಲ್ಯಾಧಾರಿತ ಜೀವನ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದರು.

ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು. ಅವರು, ಜಿಲ್ಲೆಯ ಸಂಘಟನೆಯ ಬೆಳವಣಿಗೆ, ವಿವಿಧ ಯೂನಿಯನ್‌ಗಳ ವಿಸ್ತರಣೆ ಹಾಗೂ ಮುಂದಿನ ದಿನಗಳ ಸಂಘಟನಾ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಮುಖ್ಯ ಅತಿಥಿ ಕಾನೂನು ಸಲಹೆಗಾರ ವಕೀಲ ಜಯರಾಮ್ ರೈ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಂಎಸ್ ಉಪಾಧ್ಯಕ್ಷೆ ಗೀತಾ ಧರ್ಮರಾಜ್, ಇದೇ ರೀತಿಯ ಸಂಘಟನಾ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಕರೆ ನೀಡಿದರು.
ಬಿಎಂಎಸ್ ಮೋಟಾರ್ ಮಜ್ದೂರ್ ಸಂಘದ ಉಪಾಧ್ಯಕ್ಷ ನಾರಾಯಣ ಪೂಜಾರಿ, ಆಶಾ ಕಾರ್ಯಕರ್ತೆಯರ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷೆ ತುಳಸಿ ದೇವರಾಜ್, ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘ ಬಂಟ್ವಾಳ ತಾಲೂಕು ಅಧ್ಯಕ್ಷ ಶ್ರೀಕಾಂತ್, ವಿವಿಧ ಸಂಯೋಜಿತ ಸಂಘಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಶ್ರಮಿಕ ಬಂಧುಗಳು ಉಪಸ್ಥಿತರಿದ್ದರು. ಭಾರತ ಮಾತೆ, ವಿಶ್ವಕರ್ಮ ಭಗವಾನ್ ಹಾಗೂ ದತ್ತೋಪಂತ್ ಬಾಪುರಾವ್ ಥೇಂಗಡಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಬೀಡಿ ಮಜ್ದೂರ್ ಸಂಘ ಜಿಲ್ಲಾ ಕಾರ್ಯದರ್ಶಿ ನಳಿನಿ ಅಡ್ಯಾರು ಶ್ರಮಿಕ ಗೀತೆ ಹಾಡಿದರು. ಬಿಎಂಎಸ್ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮಣಿಹಳ್ಳ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಸಂಘದ ಬಂಟ್ವಾಳ ತಾಲೂಕು ಕಾರ್ಯದರ್ಶಿ ಡೀಲಾಕ್ಷೀ ವಂದಿಸಿದರು. ಉಮಾಶಂಕರ್ ಕಾರ್ಯಕ್ರಮ ನಿರೂಪಿಸಿದರು.



Be the first to comment on "ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆ"