ಬಂಟ್ವಾಳ

ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ

ಬಂಟ್ವಾಳ:: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ ಪೆರ್ನೆ ನೆಕ್ಕರೆ ಅಮೈ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

OPTIC WORLD

ದುರಂತದಲ್ಲಿ ಅಮೂಲ್ಯ ಜೀವ ಕಳೆದುಕೊಂಡ ಬಾಲಕಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಮೃತಳ ತಾಯಿ-ತಂದೆ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ದುಃಖದಲ್ಲಿ ಭಾಗಿಯಾದರು. ಈ ದುಃಖದ ಸಂದರ್ಭದಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಧೈರ್ಯದಿಂದ ಇರಬೇಕೆಂದು ಕುಟುಂಬಕ್ಕೆ ಸಾಂತ್ವನ ಹೇಳಿ, ಮೃತಳ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.

ಈ ವೇಳೆ ದುರಂತದಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಬಿ. ರಮಾನಾಥ ರೈ ಅವರು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಜಾಹೀರಾತು
VNR GOLD

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ನಾರಾಯಣ ನಾಯ್ಕ್, ಚಂದ್ರಶೇಖರ್ ಭಂಡಾರಿ, ಬಿ ಆರ್ ಅಂಚನ್, ಫಾರೂಕ್ ಪೆರ್ನೆ, ಗೀತೆಶ್ ಪೆರ್ನೆ ಮೊದಲದವರು ಉಪಸ್ಥಿತರಿದ್ದರು

OPTIC WORLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.